ಉದಯವಾಹಿನಿ, ಬೆಂಗಳೂರು: ಸುಳ್ಳು ಹೇಳುವುದು, ಜನರನ್ನು ವಂಚಿಸುವುದು, ಫೇಕ್ ಸುದ್ದಿ ಸೃಷ್ಟಿಸುವುದು, ಇದೆಲ್ಲವೂ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಚೆನ್ನಾಗಿಯೇ ಸಿದ್ಧಿಸಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಸಂದೇಶ ಪ್ರಕಟಿಸಿರುವ ರಾಜ್ಯ ಬಿಜೆಪಿ, ನಕಲಿ ಸುದ್ದಿಗಳನ್ನು ರಚಿಸುತ್ತಾ ಕಾಲಹರಣ ಮಾಡುವ ಬದಲು ರಾಜ್ಯದ ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಮುಖ್ಯಮಂತ್ರಿ ಯೋಚಿಸಿದ್ದರೆ ರೈತರು ಆತ್ಮಹತ್ಯೆಗೆ ಶರಣಾಗುತ್ತಿರಲಿಲ್ಲ, ಮಹಿಳೆಯರ ಮೇಲೆ ಹಲ್ಲೇ ನಡೆಯುತ್ತಿರಲಿಲ್ಲ ಎಂದು ಉಲ್ಲೇಖಿಸಿದೆ. ಜತೆಗೆ ಎಡಿಟಿಂಗ್ ಮಾಸ್ಟರ್ ಎಂದು ಸಿದ್ದರಾಮಯ್ಯ ಅವರನ್ನು ಕುಹಕವಾಡಿದೆ.
ಎಲ್ಲೇದರಲ್ಲಿ ನಿದ್ದೆಗೆ ಜಾರುವುದು ನೀವೇ (ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿ) ಎಂಬುದು ಜಗತ್ತಿಗೆ ತಿಳಿದಿರುವ ವಿಷಯ. ದಿನಕ್ಕೆ 18 ಗಂಟೆ ಕೆಲಸ ಮಾಡುವ ಪ್ರಧಾನಿಯವರನ್ನು ಅವಹೇಳನ ಮಾಡಿದರೆ ಜನರು ನಂಬುತ್ತಾರೆ ಎಂಬ ಭ್ರಮೆಯಿಂದ ಆದಷ್ಟು ಬೇಗ ಹೊರ ಬನ್ನಿ. ಸರ್ಕಾರವನ್ನು ಮೋದಿ ಮಾದರಿಯಲ್ಲಿ ಮುನ್ನಡೆಸಿ ಜನರ ಸಮಸ್ಯೆ ಬಗೆಹರಿಸಿ ಎಂದು ಬಿಜೆಪಿ ಹೇಳಿದೆ.
ಮುಂದುವರಿದು, ಮಜವಾದಿ ಸಿದ್ದರಾಮಯ್ಯ ಅವರು ನಿದ್ದೆಗೆ ಶರಣಾಗುವಂತೆ ಮಾಡುವ ಅಂಶಗಳು ಎಂದು ಒಂದಿಷ್ಟು ವಿಚಾರಗಳನ್ನು ಪಟ್ಟಿ ಮಾಡಿದೆ. ರೈತರಿಗೆ ಕೊಡುವ ಪರಿಹಾರ, ಕರ್ನಾಟಕಕ್ಕೆ ಕಾವೇರಿ ನೀರು, ಮಹಿಳೆಯರಿಗೆ ಕೊಡಬೇಕಾದ ರಕ್ಷಣೆ, ಹಿಂದೂ ದೇವಾಲಯಗಳಿಗೆ ಅನುದಾನ, ಈಡೇರಿಸಲಾಗದ ಗ್ಯಾರಂಟಿಗಳು ಇವು ಸಿದ್ದರಾಮಯ್ಯ ನಿದ್ದೆಗೆ ಶರಣಾಗುವಂತೆ ಮಾಡುವ ಅಂಶಗಳು ಎಂದು ಬಿಜೆಪಿ ಟೀಕಿಸಿದೆ.

Leave a Reply

Your email address will not be published. Required fields are marked *

error: Content is protected !!