ಉದಯವಾಹಿನಿ, ಕೆ.ಆರ್.ಪುರ: ರಾಜ್ಯ ಸರ್ಕಾರದ ಮಹತ್ತರ ಯೋಜನೆಗಳ ಹಿನ್ನೆಲೆ ಜನತೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆರ್ಶಿರ್ವಾದ ಮಾಡಲಿದ್ದಾರೆ ಎಂದು ಕೆ.ಪಿ.ಸಿ.ಸಿ.ಕಾರ್ಯದರ್ಶಿಡಿ.ಕೆ.ಮೋಹನ್ ಅವರು ತಿಳಿಸಿದರು. ಕೆ.ಆರ್.ಪುರ ಕ್ಷೇತ್ರದ ಖಾಸಗಿ ಹೋಟೆಲ್‌ನಲ್ಲಿ ಏರ್ಪಡಿಸಿದ್ದ ಲೋಕಸಭಾ ಚುನಾವಣೆಯ ಪೂರ್ವಭಾವಿ ಸಿದ್ಧತಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಗೃಹಜ್ಯೋತಿ, ಶಕ್ತಿ ಯೋಜನೆ,ಗೃಹಲಕ್ಷ್ಮಿ, ಸೇರಿದಂತೆ ಕಾಂಗ್ರೆಸ್ ಪಕ್ಷ ನೀಡಿರುವ ಗ್ಯಾರಂಟಿಗಳನ್ನು ಜನತೆಗೆ ನೀಡುವ ಮೂಲಕ ಪಾರದರ್ಶಕ ಕಾರ್ಯ ಮಾಡುತ್ತಿದೆ ಈ ಹಿನ್ನೆಲೆಯಲ್ಲಿ ರಾಜ್ಯದ ಜನತೆ ಲೋಕಸಭಾ ಚುನಾವಣೆಯಲ್ಲಿ ಉತ್ತಮ ಪ್ರತಿಕ್ರಿಯೆ ನೀಡಲಿದ್ದಾರೆ ಎಂದು ನುಡಿದರು.
ಕಾಂಗ್ರೆಸ್ ಪಕ್ಷಕ್ಕೆ ಕೆ.ಆರ್.ಪುರ ಕ್ಷೇತ್ರ ಹಾಗೂ ರಾಜ್ಯದಲ್ಲಿ ಅಭೂತಪೂರ್ವವಾದ ಬೆಂಬಲ ದೊರೆತಿದ್ದು,ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಕಾಲ ಅತ್ಯುತ್ತಮ ಆಡಳಿತ ನೀಡಲಿದೆ ಎಂದು ವಿವರಿಸಿದರು.
ಕೆ.ಆರ್.ಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ದೊರೆತಿರುವುದು ಸಂತಸ ತಂದಿದೆ, ಕ್ಷೇತ್ರದಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು ಒಗ್ಗಟ್ಟಿನಲ್ಲಿ ಮುಂದುವರೆಯುತ್ತೆವೆ ಎಂದು ನುಡಿದರು.ಕಾರ್ಯಕರ್ತರ ಬೆನ್ನೆಲುಬಾಗಿ ನಿಲ್ಲುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳುತ್ತೆವೆಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ರಾಜೀವ್ ಗೌಡ,ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ವೆಂಕಟೇಶ್,ಅರುಳಪ್ಪ, ಮುಖಂಡರಾದ ದೇವೆಂದ್ರ,ಡಿ.ಕೆ.ರಮೇಶ್, ಅಗರ ಆರ್. ಪ್ರಕಾಶ್,ಮೇಡಹಳ್ಳಿ ರಾಕೇಶ್, ಪ್ರಸನ್ನ, ಸುನೀಲ್,ಬಾಬು,ನಾಗೇಶ್, ಇದ್ದರು.
