ಉದಯವಾಹಿನಿ, ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ಅಬ್ಬರ ಮುಂದುವರಿದಿದೆ, ವಿಜಯಪುರದಲ್ಲಿ ಅತಿ ಕಡಿಮೆ ತಾಪಮಾನ ೧೧.೪ ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು,ವಿಜಯನಗರ ಚಳಿಯಿಂದ ಕೂಡಿರುತ್ತದೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿಯ ಅಬ್ಬರ ಜೋರಾಗಿದೆ. ಮಂಜು ಹೆಚ್ಚಾಗಿ ಬೀಳುತ್ತಿದೆ. .ಕೆಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ದಾಖಲಾಗಿದೆ.
ಎರಡು ದಿನಗಳ ಕಾಲ ರಾಜ್ಯದ ಕೆಲವೆಡೆ ಚಳಿಯ ಜತೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರಿನಲ್ಲಿ ಬೆಳಿಗ್ಗೆ ಅಧಿಕ ಚಳಿ ಇರುತ್ತದೆ. ಮಂಜು ಕೂಡ ಬೀಳುತ್ತಿದೆ. ಸಿಲಿಕಾನ್ ಸಿಟಿ ಚಳಿಯ ಹೊಡೆತಕ್ಕೆ ತತ್ತರಿಸಿ ಹೋಗಿದೆ.
ಜನವರಿ ೧೫ರ ನಂತರ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಈ ಹಿಂದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಚಳಿಯ ಜತೆಗೆ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಆದರೆ ಸದ್ಯಕ್ಕೆ ಚಳಿಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಕಡಿಮೆ ಎನ್ನಬಹುದು.ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದಲ್ಲಿ ಮಾರ್ಚ್ ವರೆಗೆ ಸಾಮಾನ್ಯಕ್ಕಿಂತ ೭೦% ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.
