ಉದಯವಾಹಿನಿ, ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ ಒಂದೇ ಕಂತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧಪಟ್ಟಂತೆ ಇಂದು ಪಕ್ಷದ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಕಾರ್ಯಕಾರಿ ಮಂಡಳಿ ಸದಸ್ಯ ಸಯ್ಯದ್ ನಾಸಿರ್ ಹುಸೇನ್, ಸಚಿವರಾದ ಡಾ.ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ಕೆ.ಎಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ರೆಹಮಾನ್ ಖಾನ್, ಕೆ.ಜೆ. ಜಾರ್ಜ್, ಶಿವಾನಂದ ಪಾಟೀಲ್, ಜಮೀರ್ ಅಹಮ್ಮದ್ ಖಾನ್,
ಎಚ್.ಸಿ.ಮಹದೇವಪ್ಪ, ಚೆಲುವರಾಯಸ್ವಾಮಿ, ಶಿವರಾಜ್ ತಂಗಡಗಿ, ಎನ್.ಎಸ್.ಬೋಸ್‍ರಾಜ್, ಮಾಜಿ ಮುಖ್ಯಮಂತ್ರಿ ಗಳಾದ ವೀರಪ್ಪ ಮೊಯ್ಲಿ, ಜಗದೀಶ್ ಶೆಟ್ಟರ್ ಸೇರಿದಂತೆ 48 ಮಂದಿ ಸದಸ್ಯರು, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಯುವಕಾಂಗ್ರೆಸ್, ವಿದ್ಯಾರ್ಥಿ ಕಾಂಗ್ರೆಸ್, ಮಹಿಳಾ ಘಟಕ, ಸೇವಾ ದಳ ಸೇರಿದಂತೆ ಮುಂಚೂಣಿ ಘಟಕಗಳ 10 ಮಂದಿ ವಿಶೇಷ ಆಹ್ವಾನಿತರನ್ನೊಳಗೊಂಡ 58 ಮಂದಿ ಸಭೆಯಲ್ಲಿ ಭಾಗವಹಿಸಲಿ ದ್ದಾರೆ.
ಸಭೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ಕುರಿತು ಒಂದೇ ಕಂತಿನಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಚುನಾವಣಾ ಸಂಯೋಜಕರಾಗಿ ರುವ ಸಚಿವರು ಹಾಗೂ ವೀಕ್ಷಕರು ಗಳ ವರದಿ ಆಧರಿಸಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆಯ ಮಾನ ದಂಡಗಳನ್ನು ಚರ್ಚಿಸಲಾಗುತ್ತದೆ. ಬಳಿಕ ಪ್ರತೀ ಕ್ಷೇತ್ರದಿಂದ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್‍ಗೆ ಶಿಫಾರಸ್ಸು ಮಾಡುವ ಸಾಧ್ಯತೆಯಿದೆ.
