ಉದಯವಾಹಿನಿ, ಹುಬ್ಬಳ್ಳಿ,: ಹಾನಗಲ್‍ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಎಸ್.ಐ.ಟಿ.ಗೆ ವಹಿಸಲು ಆಗ್ರಹಿಸಿ ಬಿಜೆಪಿ ಹೋರಾಟ ನಡೆಸಿದ್ದು, ಸರ್ಕಾರ ಇದಕ್ಕೆ ಬಗ್ಗದೇ ಹೋದರೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ, ಅಪರಾಧ ಕೃತ್ಯ ಎಸಗಿದವರಲ್ಲಿ ಮತಬ್ಯಾಂಕ್ ಇದೆ, ಹೀಗಾಗಿ ಅದರ ರಕ್ಷಣೆ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.
ಗ್ಯಾಂಗ್‍ರೇಪ್ ಪ್ರಕರಣದಲ್ಲಿ ಸರಿಯಾದ ರೀತಿಯಲ್ಲಿ ತನಿಖೆ ನಡೆಯುತ್ತಿದೆ ಎನ್ನುತ್ತಾರೆ, ಹಾಗಾದರೆ ಇಬ್ಬರೂ ಪೊಲೀಸರನ್ನು ಅಮಾನತು ಮಾಡಿದ್ದೇಕೆ? ಎಂದು ಅವರು ಪ್ರಶ್ನಿಸಿದರು.
ಸರ್ಕಾರ ಅತ್ಯಾಚಾರಿಗಳ ಜೊತೆ ನಿಂತಿದೆ, ಸುಳ್ಳು ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ತನಿಖೆಯನ್ನು ಎಸ್.ಐ.ಟಿ.ಗೆ ಕೊಡುತ್ತಿಲ್ಲ, ಭ್ರಷ್ಟಾಚಾರವೇ ನಡೆಯುತ್ತಿದ್ದು ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಅವರು ದೂರಿದರು.
