ಉದಯವಾಹಿನಿ, ನವಲಗುಂದ: ಬೆಂಗಳೂರು: ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ನಾಳೆ ಸರ್ಕಾರಿ ರಜೆ ಘೋಷಿಸಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಸರ್ಕಾರಿ ಕಚೇರಿ, ಶಾಲಾಕಾಲೇಜು, ಸಾರ್ವಜನಿಕ ಉದ್ದಿಮೆ ಸೇರಿದಂತೆ ರಾಜ್ಯದಲ್ಲಿ ರಜೆ ಘೋಷಣೆ ಮಾಡಬೇಕು. ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ನಾಡಿನ ಜನರು ಸಡಗರ ಸಂಭ್ರಮದಿಂದ ಆಚರಣೆ ಮಾಡಲು ಅನುಕೂಲ ಮಾಡಿಕೊಡಬೇಕೆಂದು ಪತ್ರದಲ್ಲಿ ಕೋರಿದ್ದಾರೆ.

500 ವರ್ಷಗಳ ಹೋರಾಟ, ತ್ಯಾಗದ ಫಲವಾಗಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿ ನಾಳೆ ಶ್ರೀರಾಮ ವಿಗ್ರಹ ಪ್ರಾಣಪ್ರತಿಷ್ಠಾಪನೆ ನಡೆಯುತ್ತಿದೆ. ಅಂದು ಪ್ರತಿ ಮನೆಗಳಲ್ಲಿ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ದೀಪ ಬೆಳಗುವುದು, ಭಜನೆ, ಶ್ರೀರಾಮನ ಆರಾಧನೆ ನಡೆಯುತ್ತದೆ. ಹೀಗಾಗಿ ಇಡೀ ರಾಜ್ಯದಲ್ಲಿ ಸಡಗರ, ಸಂಭ್ರಮದ ಆಚರಣೆ ನಡೆಯುತ್ತದೆ.
ಪ್ರಧಾನಿ ಮೋದಿ ರಾಮಮೂರ್ತಿ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ. ಕೇಂದ್ರ ಸರ್ಕಾರವು ಈಗಾಗಲೇ ಅರ್ಧದಿನ ರಜೆ ಘೋಷಣೆ ಮಾಡಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ. ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಆಚರಣೆ ನಡೆಯುತ್ತಿದೆ. ನಾಳೆ ರಜೆ ಇಲ್ಲದೆ ಕೆಲಸ ಮಾಡುವುದರಿಂದ ಆಚರಣೆಗೆ ತೊಡಕುಂಟಾಗಬಹು

Leave a Reply

Your email address will not be published. Required fields are marked *

error: Content is protected !!