ಉದಯವಾಹಿನಿ, ದಾವಣಗೆರೆ : ನಗರದ ಪೂಜಾ ಇಂಟರ್ ನ್ಯಾಷನಲ್ ಹೊಟೇಲ್ ನಲ್ಲಿ ಅಭಿವೃದ್ಧಿ ಸಂಸ್ಥೆ ವತಿಯಿಂದ ಸಿಲ್ಕ್ ಇಂಡಿಯಾ-2024 ರೇಷ್ಮೆ ಸೀರೆಗಳ ಬೃಹತ್‌ ಪ್ರದರ್ಶನಕ್ಕೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ಕೆ ಏಕಾಂತಪ್ಪ , ರೂಪದರ್ಶಿಗಳಾದ ಸುಪ್ರೀತ್ ಒಡೆಯರ್, ಪ್ರಿಯಾಗೌಡ, ಅಯೇಷಾ ಚಾಲನೆ ನೀಡಿದರು.ಜ. 28 ವರೆಗೆ 10 ದಿವಸಗಳ ಕಾಲ ಹೋಟೆಲ್ ಪೂಜಾ ಇಂಟರ್‌ನ್ಯಾಶನಲ್ ಪ್ರದರ್ಶನ ನಡೆಯಲಿದೆ.ರೇಷ್ಮೆ ಉತ್ಪಾದನೆಯಲ್ಲಿ ಪ್ರಪಂಚದಲ್ಲಿಯೇ ಮುಂಚೂಣಿಯಲ್ಲಿದ್ದು, ಭಾರತದಲ್ಲಿ ಉತ್ಪಾದನೆಯಾಗುವ ರೇಷ್ಮೆಗೆ ರಾಷ್ಟ್ರೀಯ ಅಂತರರಾಷ್ಟ್ರೀಯ ಮತ್ತು ಮಾರುಕಟ್ಟೆಯಲ್ಲಿ ಬಹಳ ಬೇಡಿಕೆಯಿದೆ. ದೇಶದಲ್ಲಿ ವಾಯುಗುಣ ಮತ್ತು ನಿಸರ್ಗಕ್ಕೆಅನುಗುಣವಾಗಿ 4 ವಿವಿಧ ಪ್ರಭೇದದ ರೇಷ್ಮೆಗಳಿದ್ದು ಅವುಗಳಲ್ಲಿ ತಸ್ಸರ್, ಎರಿ, ಮುಲ್‌ಬಾರಿ ಮತ್ತು ಮುಗಾ ರೇಷ್ಮೆಯ ಪ್ರಮುಖವಾಗಿದ್ದು, ಇದರಲ್ಲಿ ಟಸ್ಸರ್ ಮತ್ತು ಮುಗಾ ರೇಷ್ಮೆಯು ಒಂದು ನೈಜವಾದ ಹಾಗೂ ಉಷ್ಣವಲಯದಲ್ಲಿ ಬೆಳೆಯುವ ವನ್ಯ ರೇಷ್ಮೆ ಹಾಗೂ ಸಾವಯವ (ಆರ್ಗಾನಿಕ್) ರೇಷ್ಮೆಯಾಗಿದೆ. ತಸ್ಸರ್ ಮತ್ತು ಮುಗಾರೇಷ್ಮೆ ಉತ್ಪಾದನೆಯಲ್ಲಿ ಅಸ್ಸಾಂ, ಬಿಹಾರ್ ಮತ್ತು ಛತ್ತೀಸ್ ಘಡ ರಾಜ್ಯಗಳು ದೇಶದಲ್ಲಿ ಪ್ರಮುಖವಾಗಿದೆ. ‘ಅಭಿವೃದ್ಧಿ ಸಂಸ್ಥೆಯನ್ನು ಭಾರತದಲ್ಲಿರುವ ಕುಶಲಕರ್ಮಿಗಳು ಮತ್ತು ನೇಕಾರರ ಶ್ರೋಯೋಭಿವೃದ್ಧಿಗಾಗಿ ಮೈಸೂರಿನಲ್ಲಿ ಸ್ಥಾಪಿಸಲಾಗಿದೆ. ನೇಕಾರರು ಮತ್ತು ಕುಶಲಕರ್ಮಿಗಳು ಉತ್ಪಾದಿಸುವ ಉತ್ಪನ್ನಗಳಿಗೆ ದೇಶದ ಮುಖ್ಯ ನಗರಗಳಲ್ಲಿ ಮಾರಾಟ ಮೇಳವನ್ನು ಆಯೋಜಿಸುವ ಮೂಲಕ ನೇರವಾಗಿ ಅವರ ಉತ್ಪನ್ನಗಳು ಗ್ರಾಹಕರಿಗೆ ತಲುಪಿಸುವಂತೆ ವ್ಯವಸ್ಥೆ ಮಾಡುವುದು ಮತ್ತು ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇಕಾರರೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭವನ್ನು ಹೆಚ್ಚು ಗಳಿಸುವಂತೆ ಮಾಡುವ ಉದ್ದೇಶವನ್ನು ಸಂಸ್ಥೆಯು ಹೊಂದಿದೆ.

Leave a Reply

Your email address will not be published. Required fields are marked *

error: Content is protected !!