ಉದಯವಾಹಿನಿ, ಮಂಡ್ಯ: ಅಯೋಧ್ಯೆಯ ರಾಮಮಂದಿರದಲ್ಲಿ ಬಲರಾಮನ ಪ್ರತಿಷ್ಠಾಪನೆ ನಡೆದರೆ, ಇಲ್ಲಿನ ಲೇಬರ್ ಕಾಲೋನಿಯಲ್ಲಿ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮನ ಮಂದಿರ ಲೋಕಾರ್ಪಣೆ ಮಾಡಲಾಗಿದೆ.
ಲೇಬರ್ ಕಾಲೋನಿಯಲ್ಲಿಹೊಸದಾಗಿ ನಿರ್ಮಿಸಲಾದ ರಾಮಮಂದಿರದಲ್ಲಿ ರಾಮ, ಸೀತೆ, ಲಕ್ಷ್ಮಣ, ಹನುಮ, ಸರಸ್ವತಿ ಮತ್ತು ಗಣೇಶನ ವಿಗ್ರಹಗಳನ್ನು ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೈಗಳಿಂದ ಕೆತ್ತಲಾಗಿದೆ. ಈ ವಿಗ್ರಹಗಳಿಗೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ಶಿಷ್ಯರು ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ ನೆರವೇರಿಸಿದರು.೧೦:೩೦ಕ್ಕೆ ಸಲ್ಲುವ ಮೀನ ಲಗ್ನದಲ್ಲಿ ರಾಮದೇವರ ಪ್ರತಿಷ್ಠಾಪನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಮುಂಜಾನೆ ೫ ಗಂಟೆಯಿಂದಲೇ ಹೋಮ ಹವನಗಳು ನಡೆದಿದೆ. ಸಂಗೀತ ವಾದ್ಯಗಳೊಂದಿಗೆ ಪೂಜೆಯೂ ನಡೆದಿದ್ದು, ಮನೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.
ಇಲ್ಲಿನ ನಿವಾಸಿಗಳ ೧೪ ವರ್ಷಗಳ ಪರಿಶ್ರಮದಿಂದ ಈ ದೇವಾಲಯವನ್ನು ನಿರ್ಮಿಸಲಾಗಿದ್ದು, ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ದಿನದಂದು ದೇವಾಲಯವನ್ನು ಉದ್ಘಾಟಿಸಲಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!