ಉದಯವಾಹಿನಿ, ಆನೇಕಲ್: ಪಟ್ಟಣದ ಥಳೀ ರಸ್ತೆಯಲ್ಲಿ ಭಾನುವಾರ ಸಾಫ್ಟ್‌ವೇರ್ ಕಂಪನಿ ಉದ್ಯೋಗಿಯೊಬ್ಬರ ಶವ ಅನುಮಾನಾಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಸರ್ಜಾಪುರ ಸಮೀಪದ ಖಾಸಗಿ ಕಂಪನಿಯೊಂದರ ಉದ್ಯೋಗಿ ವಿನಯ್‌ಕುಮಾರ್(24) ಮೃತರು.
ವಿನಯ್‌ಕುಮಾರ್ ತಮ್ಮ ತಾಯಿಯೊಂದಿಗೆ ಪಟ್ಟಣದಲ್ಲಿ ವಾಸವಾಗಿದ್ದರು.
ಭಾನುವಾರ ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೂ ಮುನ್ನ ವಿನಯ್ ತಮ್ಮ ಮೊಬೈಲ್ ಸಿಮ್ ತೆಗದು ಬಿಸಾಕಿದ್ದಾರೆ.
ಕತ್ತು ಮತ್ತು ಕೈ ಭಾಗವನ್ನು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿನಯ್‌ಕುಮಾರ್ ಮೊಬೈಲ್ ಅನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
