ಉದಯವಾಹಿನಿ,ಬೆಂಗಳೂರು: –ರಾಜ್ಯದ ಬರ ನಿರ್ವಹಣೆಗೆ ಆರ್ಥಿಕ ನೆರವು ನೀಡುವಂತೆ ಮನವಿ ಸಲ್ಲಿಸಿ 5 ತಿಂಗಳು ಕಳೆದರೂ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದೆ ಪದೇಪದೇ ಸಭೆಗಳನ್ನು ಮುಂದೂಡುವ ಮೂಲಕ ಅನ್ಯಾಯ ಮಾಡುತ್ತಿದೆ ಎಂದು ಕಂದಾಯ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.ನಗರದ ಫ್ರೀಡಂಪಾರ್ಕ್‍ನಲ್ಲಿ ಕಾಂಗ್ರೆಸ್ ವತಿಯಿಂದ ಆಯೋಜನೆಗೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯದ ಬರ ಪರಿಸ್ಥಿತಿ ಕುರಿತು ಕಳೆದ ಸೆಪ್ಟೆಂಬರ್‍ನಲ್ಲಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಿ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು. ಈವರೆಗೂ ಒಂದು ರೂಪಾಯಿ ಹಣ ಬಿಡುಗಡೆಯಾಗಿಲ್ಲ. ಕನಿಷ್ಟ ನಾವು ಕೊಟ್ಟಿರುವ ಪ್ರಸ್ತಾವನೆ ಕುರಿತಾಗಿಯಾದರೂ ನಿರ್ಧಾರ ತೆಗೆದುಕೊಳ್ಳಬೇಕಿತ್ತು ಎಂದರು.

ಡಿಸೆಂಬರ್ 23, ಜನವರಿ 16, ಎಂದು ಎರಡು ಬಾರಿ ಸಭೆ ಕರೆದು, ಪದೇಪದೇ ಮುಂದೂಡುತ್ತಿದ್ದಾರೆ. ನಮ್ಮ ರಾಜ್ಯಕ್ಕಾಗುತ್ತಿರುವ ಅನ್ಯಾಯದ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್‍ನ 23 ಎಂಪಿಗಳು ಧ್ವನಿಯೆತ್ತುವ ಧೈರ್ಯ ತೋರಿಸುತ್ತಿಲ್ಲ ಎಂದು ಆರೋಪಿಸಿದರು.
27 ಮಂದಿ ಸಂಸದರು ರಾಜ್ಯಕ್ಕೆ ಗೋಳಾಗಿದ್ದಾರೆ. ಬರೀ ಹೋಳು ಬಿಡುತ್ತಾ ಕಾಲ ಕಳೆಯುತ್ತಿದ್ದಾರೆ. ಬರ ನಿರ್ವಹಣೆ ಅಷ್ಟೇ ಅಲ್ಲ ವಿವಿಧ ಯೋಜನೆಗಳ ವಿಷಯದಲ್ಲೂ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ.
ಉತ್ತರ ಕರ್ನಾಟಕ ಭಾಗದ ಕುಡಿಯುವ ನೀರಿನ ಯೋಜನೆ ಮಹದಾಯಿ ಜಾರಿಗೆ ನ್ಯಾಯಾಕರಣದ ತೀರ್ಪು ಬಂದಿದೆ. ಕೇಂದ್ರ ಸರ್ಕಾರ ಅರಣ್ಯ ಮತ್ತು ಪರಿಸರ ಇಲಾಖೆಯಿಂದ ನಿರಪೇಕ್ಷಣಾ ಪತ್ರ ಕೊಟ್ಟರೆ ಯೋಜನೆ ಕಾರ್ಯಾರಂಭವಾಗಲಿದೆ. ಅದರ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.

Leave a Reply

Your email address will not be published. Required fields are marked *

error: Content is protected !!