ಉದಯವಾಹಿನಿ, ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನ ವತಿಯಿಂದ ಕರ್ನಾಟಕ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ, ಕೆಚ್ಚೆದೆಯ ಹೋರಾಟಗಾರ, ಕನ್ನಡಕಲಿ, ಶೂರ, ಧೀರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ೧೯೩ನೇ ಸ್ಮರಣೋತ್ಸವ ಪ್ರಯುಕ್ತ ಜ. ೨೬ ರಂದು ಬೆಳಿಗ್ಗೆ ೧೧ಕ್ಕೆ ದೇವರಾಜ ಅರಸು ವೃತ್ತ (ಖೋಡೆ ಸರ್ಕಲ್) ರೈಲ್ವೆ ನಿಲ್ದಾಣ ಎದುರು, ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಜಗದ್ಗುರು ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರು ವಹಿಸಲಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರು ಮಾಲಾರ್ಪಣೆ ಮಾಡುವರು. ಬಿಬಿಎಂಪಿ ಆಡಳಿತಗಾರ ರಾಕೇಶ್ ಸಿಂಗ್ ಉಪಸ್ಥಿತರಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್‌ರವರು ಅಧ್ಯಕ್ಷತೆ ಮಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧನ ಪರಿಷತ್ ಸದಸ್ಯರುಗಳಾದ ಹೆಚ್. ವಿಶ್ವನಾಥ್, ಉಮಾಶ್ರೀ, ನಾಗರಾಜ್ ಯಾದವ್, ಮಾಜಿ ಸಚಿವರಾದ ಹೆಚ್.ಎಂ. ರೇವಣ್ಣ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿ ದಯಾನಂದ್, ಬಿಬಿಎಂಪಿ ವಲಯ ಆಯುಕ್ತ (ಪಶ್ಚಿಮ), ಡಾ. ದೀಪಕ್ ಆರ್.ಎಲ್., ಜಂಟಿ ಆಯುಕ್ತ ಯೋಗೇಶ್ ಅವರು ಆಗಮಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಮಾಜಿ ಮಹಾ ಪೌರರುಗಳಾದ ಜೆ. ಹುಚ್ಚಪ್ಪ, ಜಿ. ಪದ್ಮಾವತಿ, ಮಾಜಿ ಪಾಲಿಕೆ ಸದಸ್ಯ ಟಿ. ಮಲ್ಲೇಶ್, ಹುಬ್ಬಳ್ಳಿ ಧಾರವಾಡ ನಗರಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣ ಅವರುಗಳು ಆಗಮಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ರಾಯಣ್ಣ ಅಭಿಮಾನಿಗಳು ಆಗಮಿಸಬೇಕೆಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದ ಗೌರವಾಧ್ಯಕ್ಷ ಜಿ.ಎಲ್. ನಾರಾಯಣ ಸ್ವಾಮಿ, ಅಧ್ಯಕ್ಷ ಸಂಗೊಳ್ಳಿ ಕೃಷ್ಣಮೂರ್ತಿ, ಜಂಟಿ ಕಾರ್ಯದರ್ಶಿ ಹೆಚ್. ವಿಶ್ವನಾಥ್, ಮಹದೇವ್ (ಮೈಕೋ) ಮತ್ತು ಪದಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

Leave a Reply

Your email address will not be published. Required fields are marked *

error: Content is protected !!