ಉದಯವಾಹಿನಿ, ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನ ವಿಜಯನಗರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಚಂದ್ರಾ ಬಡಾವಣೆಯಲ್ಲಿ ಇದೇ ಜನವರಿ 26ರ ಗಣರಾಜ್ಯೋತ್ಸವ ದಿನದಿಂದ ಅತೀ ಎತ್ತರದ ರಾಷ್ಟ್ರಧ್ವಜ ಸ್ಥಂಭದಲ್ಲಿ ತ್ರಿವರ್ಣ ಧ್ವಜ ಹಾರಾಡಲಿದೆ.ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಅಂದು ಬೆಳಿಗ್ಗೆ 8-30 ಗಂಟೆಗೆ ಚಂದ್ರಾ ಬಡಾವಣೆಯ ಉದ್ಯಾನದಲ್ಲಿ ಈ ಬಾನೆತ್ತರದ ರಾಷ್ಟ್ರಧ್ವಜ ಸ್ಥಂಭವನ್ನು ಲೋಕಾರ್ಪಣೆ ಮಾಡಿ, ಪ್ರಪ್ರಥಮ ಬಾರಿಗೆ ರಾಷ್ಟ್ರದ ತ್ರಿವರ್ಣ ಧ್ವಜÁರೋಹಣವನ್ನು ನೆರವೇರಿಸಲಿದ್ದಾರೆ.
ಸಂವಿಧಾನದ ಆಶಯಗಳಾದ ದೇಶ ಪ್ರೇಮ, ದೇಶ ಭಕ್ತಿ, ಸೋದರತೆ ಮತ್ತು ಸಾಮರಸ್ಯವನ್ನು ಉಳಿಸಿ ಬೆಳೆಸಲು ಪ್ರೇರಣೆ ಮತ್ತು ಸೂರ್ತಿ ನೀಡುವ ಈ ಸಮಾರಂಭದಲ್ಲಿ ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಗೋವಿಂದರಾಜನಗರ ಶಾಸಕ ಪ್ರಿಯಾ ಕೃಷ್ಣ ಅವರೂ ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಮಾರಂಭದ ಪ್ರಾರಂಭಕ್ಕೆ ಮುನ್ನ, ಬೆಳಿಗ್ಗೆ 7-30 ಗಂಟೆಗೆ ವಿವಿಧ ಕಲಾ ತಂಡಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಹಾಗೂ ವಾದ್ಯಗೋಷ್ಠಿ ಸಹಿತವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಲಿವೆ.
ಸಮಾರಂಭದ ನಂತರ ಬೆಳಿಗ್ಗೆ 10 ಗಂಟೆಗೆ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ನಾಡಫ್ರಭು ವಾಣಿಜ್ಯ ಸಂಕೀರ್ಣ ಆವರಣದಲ್ಲಿ ರಕ್ತದಾನ ಶಿಬಿರ ಹಾಗೂ ಅರ್ಬುದ ರೋಗ (ಕ್ಯಾನ್ಸರ್ ) ಉಚಿತ ತಪಾಸಣಾ ಶಿಬರವನ್ನೂ ಆಯೋಜಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!