ಉದಯವಾಹಿನಿ, ಬೆಂಗಳೂರು: ಬಹಳ ದಿನಗಳಿಂದ ನಿರೀಕ್ಷೆಯಲ್ಲಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ನಿನ್ನೆ ನಡೆದ ಲಿಖಿತ ಮರು ಪರೀಕ್ಷೆಗೆ ಯಾವುದೇ ಗೊಂದಲಗಳಿಲ್ಲದೆ ಸುಗಮವಾಗಿ ನಡೆದಿದೆ. ಮೂರನೇ ಹಂತದಲ್ಲಿ ಮತ್ತೆ 660 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾೀಕಾರ ದಿಂದಲೇ ಪರೀಕ್ಷೆ ನಡೆಸಲು ಶೀಘ್ರವೇ ಅಧಿಸೂಚನೆ ಹೊರಡಿಸುವುದಾಗಿ ಗೃಹ ಸಚಿವರ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದ ಪರೀಕ್ಷೆಯಲ್ಲಿ ಯಾರೂ ಕೂಡ ಬ್ಲೂಟೂತ್ಗಳನ್ನು ಒಳಗಡೆ ತೆಗೆದುಕೊಂಡು ಹೋಗುವ ತರುವ ಪ್ರಯತ್ನ ಸಾಧ್ಯವಾಗಿಲ್ಲ. ಆ ರೀತಿ ಪ್ರಯತ್ನ ಕೂಡ ಆಗಿಲ್ಲ ಎಂದು ಭಾವಿಸುತ್ತೇನೆ ಎಂದರು. ಸುಮಾರು 54 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆಯಬೇಕಿತ್ತು, ಅದರಲ್ಲಿ ಶೇ.65 ರಿಂದ 70 ಮಂದಿ ಪರೀಕ್ಷೆ ಬರೆದಿದ್ದಾರೆ . ಲಿಖಿತ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಶೀಘ್ರವಾಗಿ ಮೌಲ್ಯಮಾಪನ ಮಾಡಿ ಆದಷ್ಟು ಬೇಗ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ ಎಂದರು.
