udayavahiniಉದಯವಾಹಿನಿ, ದೇವನಹಳ್ಳಿ : ತಾಲೂಕಿನ ಜನತೆ ಉಚಿತ ಆರೋಗ್ಯ ತಪಾಸಣಾ ಶಿಬಿರದ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಂಡು ಪ್ರಾರಂಬಿಕ ಹಂತದಲ್ಲಿ ರೋಗ ಪತ್ತೆ ಹಚ್ಚಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಬ್ಲಾಕ್ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ವಿ.ಶಾಂತಕುಮಾರ್ ತಿಳಿಸಿದರು. ದೇವನಹಳ್ಳಿ ತಾಲೂಕಿನ ಗೊಬ್ಬರಗುಂಟೆ ಗ್ರಾಮದಲ್ಲಿ ರಾಮಯ್ಯ ವಿಶ್ವವಿದ್ಯಾಲಯ ಹಾಗೂ ವೈದ್ಯಕೀಯ ಕಾಲೇಜು ವತಿಯಿಂದ ಉಚಿತ ಮಲ್ಟಿಸ್ಪೇಷಾಲಿಟಿ ವೈದ್ಯಕೀಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತಾನಾಡಿದ ಅವರು ತಾಲೂಕಿನ ಪ್ರತಿ ಗ್ರಾಮದಲ್ಲಿಯೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮಾಡಿದರೆ, ಪ್ರತಿಯೊಬ್ಬರ ನಾಗರೀಕರಿಗೂ ಉಪಯೋಗವಾಗಲಿದೆ. ನಗರ ಪ್ರದೇಶಗಳಿಗೆ ಹೋಗಿ ಆರೋಗ್ಯ ತಪಾಸಣೆ ಮಾಡಿಸುವುದು ಗ್ರಾಮೀಣ ಭಾಗದ ಬಡವರಿಗೆ ಕಷ್ಟಸಾಧ್ಯವಾಗಿದೆ. ಇಂತಹ ಆರೋಗ್ಯ ಶಿಬಿರಗಳು ಹೆಚ್ಚು ಹೆಚ್ಚು ಆಗಬೇಕು. ಗ್ರಾಮೀಣ ಭಾಗದ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಆಗಬೇಕು. ರಾಮಯ್ಯ ಆಸ್ಪತ್ರೆಯಿಂದ ಇಂತಹ ಶಿಬಿರಗಳನ್ನು ಆಯೋಜಿಸಿದರೆ ಅದಕ್ಕೆ ತಗಲುವ ವೆಚ್ಚವನ್ನು ಸ್ವಯಂ ಭರಿಸುತ್ತೇನೆ ಎಂದರು. ಆವತಿ ಗ್ರಾಪಂ ಮಾಜಿ ಸದಸ್ಯ ಗೋಪಾಲಕೃಷ್ಣ ಮಾತನಾಡಿ, ನಮ್ಮ ಗ್ರಾಮದಲ್ಲಿ ಬಡವರು ಸಾಕಷ್ಟು ಮಂದಿ ಇದ್ದಾರೆ. ಹಳ್ಳಿ ಜನ ಸಾಮಾನ್ಯವಾಗಿ ಪಟ್ಟಣದ ಆಸ್ಪತ್ರೆಗೆ ಹೋಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಶಕ್ತಿ ಇರುವುದಿಲ್ಲ. ಅದ್ದರಿಂದ ಎಂ.ಎಸ್.ರಾಮಯ್ಯ ಆಸ್ಪತ್ರೆಯವರು 5 ವರ್ಷಗಳ ಕಾಲ ದತ್ತು ಸ್ವೀಕಾರ ಮಾಡಿದ್ದಾರೆ. 5 ವರ್ಷವೂ ಇದೇ ರೀತಿ ಕ್ಯಾಂಪ್ ಮಾಡಿಕೊಂಡು ಹೋಗುತ್ತಿದ್ದಾರೆ. ಪ್ರತಿಬಾರಿಯೂ ಸಹ ಶಿಬಿರವನ್ನು ಮಾಡಲು ನಮ್ಮಗಳ ಸಹಕಾರವೂ ಸದಾ ಇರುತ್ತದೆ. ಎಂದರು. ಈ ವೇಳೆ ಆವತಿ ಗ್ರಾಪಂ ಅಧ್ಯಕ್ಷ ಮಂಜುನಾಥ್ ಜಿಪಂ ಮಾಜಿ ಸದಸ್ಯ ಕೆ.ಸಿ.ಮಂಜುನಾಥ್, ಮುಖಂಡರಾದ ಭೂವನಹಳ್ಳಿ ಮುನಿರಾಜು, ಕೆ.ಸಿ.ರಾಮಚಂದ್ರಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ಅಪ್ತ ಸಹಾಯಕ ಅರ್ಜುನ್, ರಾಮಯ್ಯ ವಿಶ್ವವಿದ್ಯಾಲಯ ಹಾಗೂ ವೈದ್ಯಕೀಯ ವಿಭಾಗದ ಮುಖ್ಯಸ್ಥೆ ಡಾ.ಲಲಲಿತಾ,
ಮುಂತಾದವರು ಇದ್ದರು

Leave a Reply

Your email address will not be published. Required fields are marked *

error: Content is protected !!