ಉದಯವಾಹಿನಿ, ಶಿಡ್ಲಘಟ್ಟ: ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮಲಿನ್ಯ ಹೆಚ್ಚಾಗುತ್ತದೆ. ಸರ್ಕಾರ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇದಿಸಿದೆ ಪ್ಲಾಸ್ಟಿಕ್ ಮುಕ್ತ ನಗರ ಮಾಡುವಲ್ಲಿ ಸಾರ್ವಜನಿಕರ ಪಾತ್ರ ಮಹತ್ತರವಾದುದ್ದು ಎಂದು ಪೌರಾಯುಕ್ತ ಮಂಜುನಾಥ್ ತಿಳಿಸಿದರು. ನಗರದ ಸಗರಸಭೆ ವತಿಯಿಂದ ಪ್ಲಾಸ್ಟಿಕ್ ಮುಕ್ತ ಅಭಿಯಾನದ ಅಡಿಯಲ್ಲಿ ಬೀದಿನಾಟಕದ ಮೂಲಕ ಸಾರ್ಬಜನಿಕರಿಗೆ ಅರಿವು ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ನಗರದ ವಾಸಿಗಳು ಕಡ್ಡಾಯವಾಗಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ನಿಷೇಧಿಸಬೇಕು ಮತ್ತು ಒಣ ಕಸ, ಹಸಿಕಸ ವಿಂಗಡಿಸಿ ನಗರಸಭೆ ಕಸದ ವಾಹನ ಬಂದಾಗ ಹಾಕಿ ಪ್ಲಾಸ್ಟಿಕ್ ಬ್ಯಾಗ್ ಮತ್ತು ಪ್ಲಾಸ್ಟಿಕ್ ವಸ್ತುಗಳಿಂದ ಮಾನವ ಕುಲಕ್ಕೆ, ಪ್ರಾಣಿ-ಪಕ್ಷಿಗಳಿಗೆ ಸಂಚಕಾರವಾಗಲಿದೆ ಎಂದರು.
ನಗರಸಭೆ ಸದಸ್ಯ ಅನಿಲ್ ಕುಮಾರ್ ಮಾತನಾಡಿನಗರದ ಸಾರ್ವಜನಿಕರಿಗೆ ಬೀದಿ ನಾಟಕದ ಮೂಲಕಪ್ಲಾಸ್ಟಿಕ್ ಬಳಕೆಯಿಂದಾಗುವ ಅನಾಹುತದ ಬಗ್ಗೆ ಅರಿವು ಮೂಡಿಸುತ್ತಿರುವುದು ನಗರದ ವಾಸಿಗಳ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ವಸ್ತುಗಳು ಬಹಳ ಅಪಾಯಕಾರಿಯಾದ್ದರಿಂದ ಸಂಪೂರ್ಣ ಪ್ಲಾಸ್ಟಿಕ್ ಬ್ಯಾಗ್ ನಿಷೇಧಿಸಿದ ಹಿನ್ನಲೆ ಬಟ್ಟೆ ಬ್ಯಾಗ್ ಗಳನ್ನು ಬಳಸಿ ಎಂದರು. ಜಿಲ್ಲಾ ಯೋಜನಾ ನಿರ್ದೇಶಕ ಸಂತೋಷ್ ಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮೋಹನ್ ಕುಮಾರ್, ಆರೋಗ್ಯ ನಿರೀಕ್ಷಕಿ ಮಕ್ತಾಂಭ, ಕಿರಿಯ ಆರೋಗ್ಯ ನಿರೀಕ್ಷಕ ಎಂ ರಾಜೇಶ್. ನಗರಸಭೆ ಸದಸ್ಯರಾದ ಮೌಲಾ, ಮಂಜುನಾಥ್, ಸಿಬ್ಬಂದಿ ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!