ಉದಯವಾಹಿನಿ, ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಸೇರುವ ದಿಢೀರ್ ನಿರ್ಧಾರ ಕಾಂಗ್ರೆಸ್‍ಗೆ ಆಘಾತವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಶ್ವಾಸ ಹಾಗೂ ಆತ್ಮಸಾಕ್ಷಿಗೆ ಧಕ್ಕೆಯಾಗಿದೆ ಎಂದು ದೂರಿದ್ದಾರೆ.
ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಜಗದೀಶ್ ಶೆಟ್ಟರ್ ಮಾತೃಪಕ್ಷಕ್ಕೆ ಮರಳುತ್ತಿದ್ದಂತೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಇತ್ತೀಚೆಗೆ ಜಗದೀಶ್ ಶೆಟ್ಟರ್‍ರವರು ತಮ್ಮ ಬೆಂಬಲಿಗರನ್ನು ಬಿಜೆಪಿಗೆ ಕಳುಹಿಸುತ್ತಿದ್ದಾರೆಂಬ ಮಾಹಿತಿ ನನಗೆ ತಲುಪಿತ್ತು. ಈ ಬಗ್ಗೆ ನಿನ್ನೆ ಬೆಳಿಗ್ಗೆ ಕೂಡ ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದೆ. ನನಗೆ ಕಾಂಗ್ರೆಸ್ ಪಕ್ಷ ರಾಜಕೀಯವಾಗಿ ಮರುಜೀವ ನೀಡಿದೆ. ಹೀಗಾಗಿ ಪಕ್ಷ ಬಿಡುವ ಮಾತೇ ಇಲ್ಲ ಎಂದಿದ್ದರು. ಅದರ ಆಧಾರದ ಮೇಲೆ ನಾನು ಮೈಸೂರಿನಲ್ಲಿ ಹೇಳಿಕೆ ನೀಡಿದ್ದೆ. ಈಗ ಅವರ ನಿರ್ಧಾರ ವಿಶ್ವಾಸಕ್ಕೆ ಧಕ್ಕೆಯುಂಟು ಮಾಡಿದೆ ಎಂದರು.
