ಉದಯವಾಹಿನಿ, ನೆಲಮಂಗಲ: ಕೌಟುಂಬಿಕ ವಿಚಾರವಾಗಿ ದಂಪತಿ ನಡುವೆ ನಡೆದ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲೂಕಿನ ಗೋರಿನಬೆಲೆ ಗ್ರಾಮದಲ್ಲಿ ರಾತ್ರಿ ನಡೆದಿದೆ. ಭಾಗ್ಯಮ್ಮ (35) ಪತಿಯಿಂದ ಕೊಲೆಯಾದ ಮಹಿಳೆ. ಭಾಗ್ಯಮ್ಮ ಬ್ಯೂಟಿ ಪಾರ್ಲರ್‍ನಲ್ಲಿ ಕೆಲಸ ಮಾಡುತ್ತಿದ್ದು, ನೆಲಮಂಗಲ ನಗರದ ರಮೇಶ ಎಂಬು ವನನ್ನು ಎರಡನೇ ಮದುವೆ ಯಾಗಿದ್ದರು.

ಪ್ರಾರಂಭದಲ್ಲಿ ಇವರು ಅನ್ಯೋನ್ಯವಾಗಿದ್ದರು. ಆದರೆ ಇತ್ತೀಚೆಗೆ ಸಣ್ಣಪುಟ್ಟ ವಿಚಾರಕ್ಕೂ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಕಳೆದ ರಾತ್ರಿಯೂ ಸಹ ಇಬ್ಬರ ನಡುವೆ ಜಗಳ ನಡೆದಿದ್ದು, ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿ ರಮೇಶ ಹರಿತವಾದ ಚಾಕುವಿನಿಂದ ಭಾಗ್ಯಮ್ಮನ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ಮಾಲ್ಡೀವ್ಸ್ ಅಧ್ಯಕ್ಷರಿಗೆ ತಲೆನೋವಾದ ಭಾರತ ವಿರೋಧಿ ನಿಲುವು ಸುದ್ದಿ ತಿಳಿಯುತ್ತಿದ್ದಂತೆ ನೆಲಮಂಗಲ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!