ಉದಯವಾಹಿನಿ, ಬೆಂಗಳೂರು: ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಹಣ, ಆಭರಣ ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಗೋವಿಂದರಾಜ ನಗರ ಠಾಣೆ ಪೊಲೀಸರು ಬಂಧಿಸಿ 4.50 ಲಕ್ಷ ರೂ. ಮೌಲ್ಯದ 80 ಗ್ರಾಂ ಚಿನ್ನಾಭರಣ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಕೆಆರ್ ಪುರಂನ ದೇವಸಂದ್ರ ನಿವಾಸಿ ಇಮ್ರಾನ್‍ಖಾನ್ ಅಲಿಯಾಸ್ ಕೀಡ್(26) ಬಂಧಿತ ಆರೋಪಿ. ಈತ ಹಗಲು ಮತ್ತು ರಾತ್ರಿ ವೇಳೆ ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಬೀಗ ಒಡೆದು ಒಳನುಗ್ಗಿ ಕೈಗೆ ಸಿಕ್ಕಿದ ಹಣ, ಆಭರಣಗಳನ್ನು ದೋಚಿ ಪರಾರಿಯಾಗುತ್ತಿದ್ದನು.
ಮನೆಗಳ್ಳತನದ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಗೋವಿಂದರಾಜ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿ 4.50 ಲಕ್ಷ ರೂ. ಮೌಲ್ಯದ 80 ಗ್ರಾಂ ತೂಕದ ಚಿನ್ನಾಭರಣ ಗಳನ್ನು ವಶಪಡಿಸಿ ಕೊಂಡಿದ್ದಾರೆ.
ಪಶ್ಚಿಮ ವಿಭಾಗದ ಉಪಪೊಲೀಸ್ ಆಯುಕ್ತ ಗಿರೀಶ್ ಅವರ ನೇತೃತ್ವದಲ್ಲಿ ಸಹಾಯಕ ಪೊಲೀಸ್ ಆಯುಕ್ತ ಚಂದನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಇನ್ಸ್‍ಪೆಕ್ಟರ್ ಸುಬ್ರಮಣಿ ಹಾಗೂ ಸಿಬ್ಬಂದಿ ತಂಡ ಈ ಕಾರ್ಯಾಚರಣೆ ಕೈಗೊಂಡಿತ್ತು.
