ಉದಯವಾಹಿನಿ, ಚಿಕ್ಕಬಳ್ಳಾಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮ ನಿಯಮಿತ, ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ “ರಾಷ್ಟ್ರೀಯ ಗ್ರಾಹಕರ ಹಕ್ಕುಗಳ ದಿನಾಚರಣೆ”ಯನ್ನು ಜನವರಿ ೨೫ ರಂದು ಬೆಳಿಗ್ಗೆ ೧೦:೦೦ ಗಂಟೆಗೆ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ನ ಸರ್. ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಗೌರಿವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನೇರಳೆ ವೀರಭದ್ರಯ್ಯ ಭವಾನಿ ರವರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ರವರು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಸೈಯದ್ ಅನ್ಸರ್ ಕಲೀಂ, ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ. ಅರುಣ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್. ನಾಗೇಶ್ ರವರು ಭಾಗವಹಿಸಲಿದ್ದಾರೆ.
ಉಪಸ್ಥಿತರಾಗಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಹೆಚ್.ಜನಾರ್ಧನ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್. ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಎಸ್.ಮುರಳಿ ಮೋಹನ್ ರವರು ಭಾಗವಹಿಸಲಿದ್ದಾರೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಸವಿತ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
