ಉದಯವಾಹಿನಿ, ಮಂಡ್ಯ: ‘ಜಿಲ್ಲೆಯ ಏಳೂ ತಾಲ್ಲೂಕುಗಳಲ್ಲಿ ಬರಗಾಲ ಕಾಡುತ್ತಿದ್ದು ಪರಿಸ್ಥಿತಿ ನಿರ್ವಹಣೆಗೆ ನಮ್ಮ ಸರ್ಕಾರ ಜಿಲ್ಲೆಗೆ ₹ 10.50 ಕೋಟಿ ಬಿಡುಗಡೆ ಮಾಡಿದೆ. ಜನರ ಸಂಕಷ್ಟಗಳಿಗೆ ನಮ್ಮ ಸರ್ಕಾರ ಸ್ಪಂದಿಸಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಶುಕ್ರವಾರ ನಡೆದ 75ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಬರ ಪರಿಸ್ಥಿತಿಯಲ್ಲಿ ರೈತರಿಗೆ, ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 5 ಕೆ.ಜಿ ಅಕ್ಕಿ ಹಾಗೂ 5 ಕೆ.ಜಿ. ಅಕ್ಕಿಗೆ ಬದಲಾಗಿ ನಗದು 4,36,510 ಫಲಾನುಭವಿಗಳಿಗೆ ₹137.50 ಕೋಟಿ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ’ ಎಂದರು.
‘ಗೃಹಜ್ಯೋತಿ ಯೋಜನೆಯಡಿ 4,64,303 ಗ್ರಾಹಕರು ಹೆಸರು ನೋಂದಾಯಿಸಿಕೊಂಡಿದ್ದು, 8.90 ಕೋಟಿ ಯೂನಿಟ್ಸ್ ವಿದ್ಯುಚ್ಛಕ್ತಿಯನ್ನು ಗ್ರಾಹಕರಿಗೆ ಉಚಿತವಾಗಿ ಒದಗಿಸಿ ₹76.22 ಕೋಟಿ ಪಾವತಿಸಲಾಗಿದೆ, ಗೃಹಲಕ್ಷ್ಮಿ ಯೋಜನೆಯಡಿ 4,35,820 ಮಹಿಳೆಯರಿಗೆ ತಲಾ ₹2 ಸಾವಿರದಂತೆ ₹89.17 ಕೋಟಿ ಪಾವತಿಸಲಾಗಿದೆ’ ಎಂದರು.
