ಉದಯವಾಹಿನಿ, ತುಮಕೂರು: ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಆರೋಪಿ ಸೈಯದ್‌ನನ್ನು ಬಂಧಿಸಿರುವ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಆರೋಪಿ ತುಮಕೂರು ಜಿಲ್ಲೆ ಗುಬ್ಬಿ ಪೊಲೀಸ್ ಠಾಣೆಯಿಂದ ಎಸ್ಕೇಪ್ ಆಗಿದ್ದನು.
ಕಳ್ಳತನ ಪ್ರಕರಣದಲ್ಲಿ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿ ಗುಬ್ಬಿ ಠಾಣೆಗೆ ಕರೆತರಲಾಗಿತ್ತು. ಶುಕ್ರವಾರ ಬೆಳಗಿನ
ಜಾವ ೪.೩೦ಕ್ಕೆ ಠಾಣೆಯಿಂದ ಸದರಿ ಆರೋಪಿ ಪರಾರಿಯಾಗಿದ್ದನು.
ಆರೋಪಿ ಎಡಗೈ ಮೇಲೆ ಸಿರಿಗನ್ನಡಂ ಬಲಗೈ ಮೇಲೆ ಎಲ್ಲಾ ಧರ್ಮದ ಅಚ್ಚೆ ಇರೋದಾಗಿ ಮಾಹಿತಿ ಇದೆ. ಗದಗ ಜಿಲ್ಲೆಯ ಹುಲ್ಲೂರು ಗ್ರಾಮದ ವಾಸಿಯಾಗಿರುವ ಸೈಯದ್ ಡ್ಯಾನ್ಸ್ ಕೋರಿಯಾಗ್ರಾಪರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದನು.
ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆ ಸಿಬ್ಬಂದಿ ಆರೋಪಿಯನ್ನು ಪುನಃ ವಶಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈಗಾಗಲೇ ಈ ಪ್ರಕರಣದ ಕರ್ತವ್ಯ ಲೋಪ ಹಿನ್ನೆಲೆ
ಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ.
ಅವರು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಐವರು
ಪೊಲೀಸರನ್ನು ಅಮಾನತುಗೊಳಿಸಿದ್ದಾರೆ.
