ಉದಯವಾಹಿನಿ, ನಂಜನಗೂಡು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳೆಯರ ಸಬಲೀಕರಣಕ್ಕೆ ಹೆಚ್ಚು ಪೆÇ್ರೀತ್ಸಾಹ ನೀಡುತ್ತಿದ್ದು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮಹಿಳೆಯರು ಆರ್ಥಿಕವಾಗಿ ಸಬಲರಾಗಿ ಬದುಕಬೇಕು ಎಂದು ವಿಧಾನ ಪರಿಷದಸ್ಯ ಸಿಎಂ ಮಂಚೇಗೌಡ ಕರೆ ನೀಡಿದರು.
ದೇವರಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಗೋವರ್ಧನ್ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆಯಿತು ಸಮಾಜದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಲಾಯಿತು.
ನಂಜನಗೂಡು ಶ್ರಾವಣ ಕಲ್ಯಾಣ ಮಂಟಪದಲ್ಲಿ ಆಶ್ರಯ ಸಹಕಾರ ಸಂಘದ ವತಿಯಿಂದ ನಡೆದ ನೂತನ ಕ್ಯಾಲೆಂಡರ್ ಬಿಡುಗಡೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದವರು ಸರ್ಕಾರ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳಿಗೆ ಹೈನುಗಾರಿಕೆಗೆ ಬಡ್ಡಿ ಇಲ್ಲದೆ ಸಾಲ ನೀಡಬೇಕು ಹಾಗೂ ಮಹಿಳೆಯರು ಪ್ರಧಾನವಾಗಿರುವ ಸಹಕಾರ ಸಂಘಗಳಿಗೆ ಶೂನ್ಯ ಬಡ್ಡಿ ದರದಲ್ಲಿ 10 ಲಕ್ಷದವರೆಗೂ ಸಾಲ ನೀಡಬೇಕು ಸಮಾಜದ ಆರೋಗ್ಯ ಮುಕ್ತವಾಗಿರಬೇಕಾದರೆ ಮಹಿಳೆಯರು ಆರ್ಥಿಕವಾಗಿ ಸಬಲರಾಗಿದ್ದರೆ ಮಾತ್ರ ಸಾಧ್ಯ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಿ ತಾಯಂದಿರಿಗೆ ಕೊಡುವಣ ಸದುಪಯೋಗವಾಗುತ್ತದೆ ಎಂಬ ನಂಬಿಕೆ ಸರ್ಕಾರಕ್ಕೆ ಆದ್ದರಿಂದ ಮಹಿಳೆಯರಿಗೆ ಹೆಚ್ಚು ಯೋಜನೆಗಳನ್ನು ನೀಡುತ್ತಿದ್ದಾರೆ ಮಹಿಳೆಯರಿಗೆ ಕಾನೂನಿನ ಅರಿವು ಇರಬೇಕಾಗುತ್ತದೆ ಇಂದು ಕಾನೂನನ್ನು ಪಾಲನೆ ಮಾಡುವವರು ಕಡಿಮೆಯಾಗಿದ್ದಾರೆ.
