ಉದಯವಾಹಿನಿ, ಬೆಂಗಳೂರು: ಆಟೋದಲ್ಲಿ ಮಲಗಿದ್ದ ಚಾಲಕನನ್ನು ಹೆದರಿಸಿ ಹಲ್ಲೆ ಮಾಡಿ ಮೊಬೈಲ್ ಹಾಗೂ ಹಣ ಸುಲಿಗೆ ಮಾಡಿದ್ದ ಖತರ್ನಾಕ್ ಚೋರರನ್ನು ಇಂದಿರಾನಗರ ಠಾಣೆ ಪೊಲೀಸರು ಬೆನ್ನಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರದ ವಿನೋದ (22), ಸ್ಟೀಫನ್ ರಾಜ್ (24) ಬಂಧಿತ ಚೋರರು.
ಘಟನೆ ವಿವರ: ಕಳೆದ ಜ.31ರಂದು ಮುಂಜಾನೆ 4 ಗಂಟೆ ಸಮಯದಲ್ಲಿ ಸಿದ್ದೇಶ್ ಎಂಬ ಆಟೋ ಚಾಲಕ ಇಂದಿರಾನಗರ ಪೊಲೀಸ್ ಠಾಣೆ ವ್ಯಾಪ್ತಿಯ 100 ಅಡಿ ರಸ್ತೆ ಸಮೀಪ ರಸ್ತೆ ಬದಿ ಆಟೋ ನಿಲ್ಲಿಸಿ ಮಲಗಿ ವಿಶ್ರಾಂತಿ ಪಡೆಯುತ್ತಿದ್ದಾಗ ಆರೋಪಿಗಳು ಚಾಲಕನನ್ನು ಬೆದರಿಸಿ ಹಲ್ಲೆ ಮಾಡಿ ಜೇಬಿನಲ್ಲಿದ್ದ ಮೊಬೈಲ್ ಹಾಗೂ 2300ರೂ. ನಗದನ್ನು ಕಿತ್ತುಕೊಂಡು ಪರಾರಿಯಾಗಿದ್ದರು.
ಈ ವೇಳೆ ಚಾಲಕ ನಗರದ ತುರ್ತು ಸೇವೆ 112ಕ್ಕೆ ಕರೆ ಮಾಡಿ ಘಟನೆ ಬಗ್ಗೆ ತಿಳಿಸಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಹೊಯ್ಸಳ 30ರ ವಾಹನದಲ್ಲಿದ್ದ ಸಹಾಯಕ ಪೊಲೀಸ್ ಇನ್ಸ್ಪೆಕ್ಟರ್ ವಿಲಿಯಮ್ ಜಾರ್ಜ್ ಮತ್ತು ಚಾಲಕ ಬೀರಪ್ಪ ಪೂಜಾರಿ ಅವರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗುತ್ತಿದ್ದ ಆರೋಪಿಗಳ ಬೆನ್ನಟ್ಟಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳ ಬಂಧನದಿಂದ ಇಂದಿರಾನಗರ, ಹಲಸೂರು, ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಾಧ ಪ್ರಕರಣಗಳು ಪತ್ತೆಯಾಗಿದ್ದು, ವಿನೋದ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ 10, ಸ್ಟೀಫನ್ ರಾಜ್ ವಿರುದ್ಧ 2 ಪ್ರಕರಣಗಳು ದಾಖಲಾಗಿವೆ.

Leave a Reply

Your email address will not be published. Required fields are marked *

error: Content is protected !!