ಉದಯವಾಹಿನಿ, ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು ಜನರಲ್ಲಿ ಆತಂಕ ಹೆಚ್ಚಿದೆ. ಮಹಿಳೆಯೊಬ್ಬರಿಗೆ ಮಂಗನ ಕಾಯಿಲೆ ಸೋಂಕು ಇರುವುದು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಈಗಾಗಲೆ ಒಬ್ಬ ಸೋಂಕಿತ ಸಾವನ್ನಪ್ಪಿದ್ದು, ನಾಲ್ವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ನಾಲ್ಕು ಸಕ್ರಿಯ ಪ್ರಕರಣಗಳಿಗೆ ಕೊಪ್ಪ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
ಜಿಲ್ಲೆಯಲ್ಲಿ ಪತ್ತೆಯಾದ ಮಂಗನ ಕಾಯಿಲೆ ಪ್ರಕರಣಗಳಲ್ಲಿ ಅತಿ ಹೆಚ್ಚು ಪ್ರಕರಣಗಳು ಕೊಪ್ಪ ತಾಲೂಕಿನ ಒಎಲ್‍ವಿ ಎಸ್ಟೇಟ್ ಭಾಗದಲ್ಲಿ ಕಂಡು ಬಂದಿದೆ. ಹೀಗಾಗಿ ಆರೋಗ್ಯ ಇಲಾಖೆಯು ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಕೊಪ್ಪ ಸರ್ಕಾರಿ ಆಸ್ಪತ್ರೆ ಯಲ್ಲಿ ಕೆಎಫ್‍ಡಿ ವಾರ್ಡ್ ತೆರೆದಿದೆ.
ಜಿಲ್ಲೆಯ ಮೂರು ತಾಲೂಕುಗಳಲ್ಲಿ ಆತಂಕ ಸೃಷ್ಟಿಯಾಗಿದ್ದು ಶಿವಮೊಗ್ಗ- ಉತ್ತರಕನ್ನಡಕ್ಕೆ ಹೊಂದಿಕೊಂಡಂತಿರುವ ಕಾಫಿನಾಡು ಮಲೆನಾಡು ಭಾಗದಲ್ಲಿ ಪ್ರತಿ ವರ್ಷ ಸೋಂಕಿನ ಆತಂಕವಿರುತ್ತದೆ. ಸೋಂಕಿಗೆ ವೃದ್ಧ ಬಲಿಯಾದ ಹಿನ್ನೆಲೆ ಜಿಲ್ಲಾದ್ಯಂತ ಆರೋಗ್ಯ ಇಲಾಖೆ ಹೈಅಲರ್ಟ್ ಆಗಿದೆ. ಅರಣ್ಯದಲ್ಲಿ ಸೋಂಕು ಹರಡದಂತೆ ಔಷ„ ಸಿಂಪಡಣೆ ಮಾಡಲಾಗುತ್ತಿದೆ. ಆರೋಗ್ಯ ಸಿಬ್ಬಂದಿ ಮನೆ ಮನೆಗೆ ತೆರಳಿ ಔಷ„ ವಿತರಣೆ ಮಾಡುತ್ತಿದ್ದಾರೆ. ಜನರು ಎಚ್ಚರಿಕೆಯಿಂದ ಇರಬೇಕು ಜಮೀನಿನಲ್ಲಿ ಮಂಗಗಳು ಸಾವನ್ನಪ್ಪಿದ್ದರೆ ಆರೋಗ್ಯ ಇಲಾಖೆಗೆ ತಿಳಿಸಬೇಕೆಂದುಮನವಿ ಮಾಡಲಾಗಿದೆ.
