ಉದಯವಾಹಿನಿ, ಕೆ.ಆರ್.ಪುರ: ಮಹದೇವಪುರ ಕ್ಷೇತ್ರದ ಹೂಡಿ ಗ್ರಾಮದಲ್ಲಿ ನೆಲಸಿರುವ ಶ್ರೀ ನಂದೀಶ್ವರ ಸ್ವಾಮಿ ದೇವಸ್ಥಾನದ ೬ನೇ ವಾರ್ಷಿಕೋತ್ಸವ ಅಂಗವಾಗಿ ವಿಶೇಷ ಹೂವಿನ ಅಲಂಕಾರ, ಪೂಜೆ, ಗಣಪತಿ ಹೋಮ, ಅನ್ನದಾನ ವಿನಿಯೋಗ, ಕುಂಬಾಭಿಷೇಕ ಸೇರಿದಂತೆ ವಿವಿಧ ಪೂಜೆ ಕೈಂಕರ್ಯಗಳು ಹಮ್ಮಿಕೊಳ್ಳಲಾಗಿತ್ತು.
ವಾರ್ಷಿಕೋತ್ಸವ ಅಂಗವಾಗಿ ದೇವಸ್ಥಾನಕ್ಕೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಪೂಜೆ ಸಲ್ಲಿಸಿ ಮಾತನಾಡಿದ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ನಂದೀಶ್ವರ ಸ್ವಾಮಿ ದೇವಸ್ಥಾನದ ೬ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಕಲ್ಯಾಣಕ್ಕಾಗಿ ಹೋಮ ಹವನ ಮಾಡಲಾಗಿದೆ ಎಂದು ನುಡಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಧರ್ಮಾಧಿಕಾರಿ ವೆಂಕಟೇಶ್ ರೆಡ್ಡಿ, ಗ್ರಾಮದ ಪ್ರಮುಖರು ಹೂಡಿ ಪಿಳ್ಳಪ್ಪ, ಅನೂಪ್ ರೆಡ್ಡಿ, ಪ್ರಕಾಶ್ ಬಾಬು, ಮಹೇಂದ್ರ, ನರೇಂದ್ರ ಬಾಬು, ಸೇರಿದಂತೆ ಹಲವಾರು ಭಾಗವಹಿಸಿದ್ದರು.
