ಉದಯವಾಹಿನಿ, ಕುಣಿಗಲ್: ಯಾರೋ ದುಷ್ಕರ್ಮಿಗಳು ಅತಿಥಿ ಶಿಕ್ಷಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದಿರುವ ಘಟನೆ ತಾಲ್ಲೂಕಿನ ಹೇರೂರು ಗ್ರಾಮದ ಬಳಿ ಇಂದು ಮುಂಜಾನೆ ನಡೆದಿದೆ.ತಾಲ್ಲೂಕಿನ ಕುಳ್ಳಿನಂಜಯ್ಯನಪಾಳ್ಯದ ನಿವಾಸಿ ಹಾಗೂ ಮೋದೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ಕೆಲಸ ನಿರ್ವಹಿಸುತ್ತಿದ್ದ ಮರಿಯಪ್ಪ (೪೭) ಎಂಬುವರೇ ಕೊಲೆಯಾಗಿರುವ ದುರ್ದೈವಿ.ದ್ವಿಚಕ್ರ ವಾಹನದಲ್ಲಿ ತನ್ನ ಗ್ರಾಮಕ್ಕೆ ಹೋಗುವ ಮಾರ್ಗ ಮಧ್ಯೆ ಸುಮಾರು ಈತನ ಮನೆ ೫೦೦ ಮೀಟರ್ ದೂರದಲ್ಲಿ ದುಷ್ಕರ್ಮಿಗಳು ಓಡಾಡಿಸಿಕೊಂಡು ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಕೊಲೆಯನ್ನು ರಸ್ತೆಯ ಸುಮಾರು ೩೦ ಮೀಟರ್ ದೂರದ ಜಮೀನಿನಲ್ಲಿ ಬಲಗೈ ಹಸ್ತವನ್ನು ಕತ್ತರಿಸಿ, ತಲೆಗೆ ಬಲವಾಗಿ ಹೊಡೆದಿದ್ದಾರೆ. ಈತ ತೆರಳುತ್ತಿದ್ದ ದ್ವಿಚಕ್ರ ವಾಹನ ರಸ್ತೆಯಲ್ಲಿ ಬಿದ್ದಿದ್ದು. ಭೀಕರವಾಗಿ ಹತ್ಯೆಗೈಯ್ಯಲಾಗಿದೆ.ಈ ಘಟನೆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪೊಲೀಸರ ತನಿಖೆಯಿಂದಷ್ಟೇ ತಿಳಿಯಬೇಕಿದೆ.ಘಟನೆಯ ಸುದ್ದಿ ತಿಳಿದ ಕೂಡಲೇ ಅಡಿಷನಲ್ ಎಸ್ಪಿ ಮರಿಯಪ್ಪ, ಡಿವೈಎಸ್ಪಿ ಓಂಪ್ರಕಾಶ್ ಹಾಗೂ ಸಿಪಿಐ ನವೀನ್‌ಗೌಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಕೊಲೆ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.ಈ ಸಂಬಂಧ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪರಿಹಾರಕ್ಕೆ ಒತ್ತಾಯ
ದಲಿತರ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಿರಂತರವಾಗಿ ನಡೆಯುತ್ತಿದೆ. ಜಾತಿವಾದಿ ಬಂಡವಾಳ ಶಾಹಿಗಳು, ರಾಜಕಾರಣಿಗಳ ಕುಮ್ಮಕ್ಕಿನಿಂದ ಹೇಯ ಕೃತ್ಯಗಳು ನಡೆಯುತ್ತಿದ್ದು, ದಲಿತ ಶಾಸಕರು, ಆ ಪಕ್ಷದ ಗುಲಾಮರಾಗಿದ್ದಾರೆ. ಗೃಹ ಸಚಿವರು ಸ್ವಂತ ಜಿಲ್ಲೆಯವರಾಗಿರುವುದರಿಂದ ಕೂಡಲೇ ಸಮಗ್ರ ತನಿಖೆ ನಡೆಸಬೇಕು. ಕೊಲೆಯಾಗಿರುವ ಅತಿಥಿ ಶಿಕ್ಷಕನ ಕುಟುಂಬಕ್ಕೆ ೨೦ ಲಕ್ಷ ರೂ. ಪರಿಹಾರ ಘೋಷಿಸಬೇಕು ಎಂದು ಬಿಜೆಪಿ ಮುಖಂಡ ಹಾಗೂ ಜಿ.ಪಂ. ಮಾಜಿ ಅಧ್ಯಕ್ಷ ವೈ.ಹೆಚ್. ಹುಚ್ಚಯ್ಯ ಆಗ್ರಹಿಸಿದ್ದಾರೆ.
