
ಉದಯವಾಹಿನಿ,ಹುಣಸೂರು: ಅ.1 ರಂದು ಆಗಮಿಸುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಲು ಹುಣಸೂರುನಿಂದ 8 ಸಾವಿರ ಮಂದಿ ಕಾಂಗ್ರೆಸ್ ಕಾರ್ಯಕರ್ತರು ತೆರಳಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾರಾಯಣ್ ತಿಳಿಸಿದರು.ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು ಹುಣಸೂರಿನಿಂದ ಬೇಗೂರಿಗೆ ತೆರಳಲು ಪ್ರತಿ ಗ್ರಾಮಗಳಿಂದ ಆಗಮಿಸುವ ಕಾರ್ಯಕರ್ತರಿಗಾಗಿ ಕೆ.ಎಸ್ .ಆರ್.ಟಿ.ಸಿ.ಬಸ್ ಹಾಗೂ ಖಾಸಗಿ ವಾಹನಗಳ ವ್ಯವಸ್ಥೆ ಮಾಡಲಾಗಿದ್ದು, ಬೇಗೂರಿಗೆ ತೆರಳಿ, ಅಲ್ಲಿಂದ ಕಡಕೊಳ ಮಾರ್ಗವಾಗಿ ಮೈಸೂರು ವರೆಗೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿಯವರೊಂದಿಗೆ ಪಾದಯಾತ್ರೆಯಲ್ಲಿ ಬಾಗವಹಿಸಲಿದ್ದಾರೆಂದು ತಿಳಿಸಿದರು.ಸುದ್ದಿಗೋಷ್ಟಿಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಕಲ್ಕುಣಿಕೆ ರಮೇಶ್, ಬಿಳಿಕೆರೆ ಬ್ಲಾಕ್ ಅಧ್ಯಕ್ಷ ದೇವರಾಜ್, ಜಿಲ್ಲಾ ಯುವ ಕಾಂಗ್ರೆಸ್ ನ ರಾಘು ಇದ್ದರು.