ಉದಯವಾಹಿನಿ, ಬೆಂಗಳೂರು: ತೊಂದರೆಯಲ್ಲಿರುವ ರೈತರ ನೆರವಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಈತನಕ 33 ಲಕ್ಷ ರೈತರಿಗೆ 628 ಕೋಟಿ ಹಣ ನೀಡಿದ್ದೇವೆ. 66 ಸಾವಿರ ರೈತರಿಗೆ ಹಣ ಸಂದಾಯ ಮಾಡುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೆಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ರೈತರಿಗೆ ಕೊಡುವ ಬರಪರಿಹಾರದಲ್ಲಿ ದೊಡ್ಡ ಮಟ್ಟದ ಲೂಟಿಯಾಗಿದೆ. ಲೂಟಿ ಮಾಡುತ್ತಿರುವುದು ಕಂಡುಬಂದರೂ ಆಗಿನ ಸರ್ಕಾರ ತಡೆಗಟ್ಟುವ ಕೆಲಸ ಮಾಡಿಲ್ಲ. ತನಿಖಾ ವರದಿ ಬಂದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಹಣ ದುರುಪಯೋಗ ಆಗದಂತೆ ನೇರವಾಗಿ ರೈತರಿಗೆ ತಲುಪಲು ನಾವು ಕ್ರಮ ಕೈಗೊಂಡಿದ್ದೇವೆ. ಆದರೆ ಹಿಂದೆ ಗ್ರಾಮ ಲೆಕ್ಕಿಗರು ಯಾರದ್ದೋ ಜಮೀನಿಗೆ ಇನ್ನಾರಿಗೋ ಪರಿಹಾರ ಕೊಡುವಂತೆ ಮಾಡಿದ್ದಾರೆ. ವ್ಯಾಪಕವಾಗಿ ಬರ ಪರಿಹಾರ ಹಣ ದುರುಪಯೋಗ ಆಗಿದೆ. ಬೆಳೆ ಬೆಳೆಯದವರಿಗೇ ಪರಿಹಾರ ಸಿಕ್ಕಿದೆ. ಬೆಳೆ ಬೆಳದವರಿಗೆ ಪರಿಹಾರ ಸಿಕ್ಕಿಲ್ಲ. ಆದರೆ ನಮ್ಮ ಸರ್ಕಾರದಲ್ಲಿ ನಮಗೆ ಪರಿಹಾರ ಸಿಕ್ಕಿಲ್ಲ ಎಂಬ ಮಾತು ಕೇಳದಂತೆ ನಿಗಾ ವಹಿಸಿದ್ದೇವೆ ಎಂದು ಹೇಳಿದರು.
ನೇರವಾಗಿ ಬೆಳೆ ಸಮೀಕ್ಷೆ ಮಾಹಿತಿ ಪಡೆದು ರೈತರ ಖಾತೆಗೆ ಪರಿಹಾರದ ಹಣ ಜಮೆ ಮಾಡಲಾಗುತ್ತಿದೆ. ರಾಜ್ಯದ 223 ತಾಲೂಕುಗಳಲ್ಲಿ ಬರ ಘೋಷಣೆ ಆಗಿದೆ. 870 ಕೋಟಿ ರೂ.ಗಳನ್ನು ಜಿಲ್ಲಾಕಾರಿ, ತಹಶೀಲ್ದಾರ್‍ಗೆ ಒದಗಿಸಿದ್ದೇವೆ. ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಅಗತ್ಯ ಇವರೆಡೆ ಬಳಸಿಕೊಳ್ಳಲು ಹೇಳಿದ್ದೇವೆ ಎಂದು ಮಾಹಿತಿ ನೀಡಿದರು.
ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೆÇೀರ್ಸ್‍ಗಳನ್ನ ರಚನೆ ಮಾಡಿದ್ದೇವೆ. ಶಾಸಕರು ನಡೆಸಿದ್ದಾರೆ. ಜಿಲ್ಲಾಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಪತ್ತು ಪ್ರಾಕಾರಗಳಿವೆ. ಮುಂಗಾರು ನಂತರ 236 ಸಭೆಗಳನ್ನು ಮಾಡಿದ್ದಾರೆ. 156 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇತ್ತು. ಖಾಸಗಿ ಬೋರ್ ವೆಲ್ ಬಾಡಿಗೆ ಪಡೆದು ನೀರು ಒದಗಿಸಿದ್ದೇವೆ 46 ಗ್ರಾಮಗಳಲ್ಲಿ ಟ್ಯಾಂಕರ್ ಗಳ ಮೂಲಕ ನೀರು ಪೂರೈಸಲಾಗುತ್ತಿದೆ. 202 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ ಎಂದು ವಿವರಿಸಿದರು.

Leave a Reply

Your email address will not be published. Required fields are marked *

error: Content is protected !!