ಉದುಯವಾಹಿನಿ, ಬೆಂಗಳೂರು: ಬೆಂಗಳೂರಿನಲ್ಲಿ ಈ ತಿಂಗಳ ೨೫ ರಂದು ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಷ್ಟ್ರೀಯ ಐಕ್ಯತಾ ಸಮಾವೇಶದ ಬಗ್ಗೆ ವಿವರ ನೀಡಿದ ಅವರು, ಭಾರತದ ಸಂವಿಧಾನ ಜಾರಿಗೆ ಬಂದು ೭೫ ವರ್ಷಗಳಾಗಿವೆ. ಅಮೃತ ಉತ್ಸವದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂಬ ತೀರ್ಮಾನ ಮಾಡಿ ೩೧ ಜಿಲ್ಲೆಗಳಲ್ಲಿ ಸಂವಿಧಾನ ಜಾಥಾ ಮಾಡುವ ಕಾರ್ಯಕ್ರಮವನ್ನು ಜನವರಿ ೨೬ ರಿಂದ ಹಮ್ಮಿಕೊಳ್ಳಲಾಗಿತ್ತು. ಈ ಜಾಥಾ ಈ ತಿಂಗಳ ೨೫ಕ್ಕೆ ಅಂತ್ಯವಾಗಲಿದ್ದು, ಬೆಂಗಳೂರಿನಲ್ಲಿ ಈ ತಿಂಗಳ ೨೪ ಮತ್ತು ೨೫ ರಂದು ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶ ನಡೆಯಲಿದೆ ಎಂದರು.ಈ ಸಮಾವೇಶದಲ್ಲಿ ಖ್ಯಾತ ಚಿಂತಕರುಗಳಾದ ಪ್ರೊ. ಅಸುತೋಷ್, ಪ್ರಶಾಂತ್ ಭಾಷಣ್, ಮೇದ ಪಾಟ್ಕರ್ ಸೇರಿದಂತೆ ಅನೇಕ ಜನ ಮೇಧಾವಿಗಳು, ಸಾಮಾಜಿಕ ಹೋರಾಟಗಾರರು ಪಾಲ್ಗೊಂಡು ಸಂವಿಧಾನದ ಬಗ್ಗೆ ಬೆಳಕು ಚೆಲ್ಲುವ ಕೆಲಸ ಮಾಡಲಿದ್ದಾರೆ ಎಂದರು.
ಫೆ. ೨೪ ರಂದು ರಾಷ್ಟ್ರೀಯ ಐಕ್ಯತಾ ಸಮಾವೇಶಕ್ಕೆ ಚಾಲನೆ ನೀಡಲಾಗುತ್ತಿದ್ದು, ೨೫ ರಂದು ಬೃಹತ್ ರ್ಯಾಲಿಯನ್ನು ಆಯೋಜಿಸಲಾಗಿದೆ ಎಂದರು.
ಸಂವಿಧಾನದಲ್ಲಿ ಏನಿದೆ, ಜನರ ಹಕ್ಕುಗಳು ಏನು, ಬಾಬಾ ಸಾಹೇಬ್ ಅಂಬೇಡ್ಕರ್ ಕೊಟ್ಟಿರುವ ಅಸ್ತ್ರಗಳ ಬಗ್ಗೆ ಜನರಿಗೆ ಮಾಹಿತಿ ನೀಡಲು ಈ ಸಮಾವೇಶಗಳನ್ನು ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ಭಾರತ ವೈವಿಧ್ಯತೆಯಲ್ಲಿ ಏಕೆ ಹೊಂದಿರುವ ದೇಶ. ಸಂವಿಧಾನ ಜಾರಿಯಾಗಿ ೭೫ ವರ್ಷ ಕಳೆದರೂ ಸಾಮಾಜಿಕ, ಆರ್ಥಿಕ ಅಸಮಾನತೆ ಇದೆ. ಬಡವರು, ದಲಿತರು, ಹಿಂದುಳಿದವರು ಅವಕಾಶ ವಂಚಿತರಾಗಿದ್ದಾರೆ. ಸಂವಿಧಾನದ ಬಗ್ಗೆ ಗೌರವ ನಂಬಿಕೆ ಇಲ್ಲದವರು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಸಂವಿಧಾನ ಜಾಗೃತಿ ಅಭಿಯಾನವನ್ನು ಸರ್ಕಾರ ಮಾಡುತ್ತಿದೆ ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಐಕ್ಯತಾ ಸಮಾವೇಶದ ಲಾಂಛನವನ್ನು ಬಿಡುಗಡೆ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಅಭಿವೃದ್ಧಿ ಆಯುಕ್ತೆ ಶಾಲಿನಿ ರಜನೀಶ್, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಸೇರಿದಂತೆ ಹಿರಿಯ ಅಧಿಕಾರಿಗ
