ಉದಯವಾಹಿನಿ, ಬೆಂಗಳೂರು: ಸಂವಿಧಾನದ ಮಹತ್ವ ಹಾಗೂ ಆಶಯಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ರಾಜಾನುಕುಂಟೆ ಗ್ರಾಮಪಂಚಾಯಿತಿ ವತಿಯಿಂದ ‘ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ’ ಹಮ್ಮಿಕೊಳ್ಳಲಾಗಿತ್ತು.೭೫ನೇ ವರ್ಷದ ಗಣರಾಜ್ಯೋತ್ಸವ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಸ್ತಬ್ಧ ಚಿತ್ರಕ್ಕೆ ಹೂವಿನ ಮಾಲಾರ್ಪಣೆ ಮಾಡಿ, ಸಂವಿಧಾನ ಪೀಠಿಕೆಯ ಭಿತ್ತಿಪತ್ರಗಳನ್ನು ಹಿಡಿದು, ಪೂರ್ಣಕುಂಭಸ್ವಾಗತ ಕೋರಲಾಯಿತು.
ಇದೇ ವೇಳೆ ಒಕ್ಕೂರಲಿನಿಂದ ಸಂವಿಧಾನ ಪೀಠಿಕೆಯ ಪ್ರಮಾಣ ವಚನ ಬೋಧಿಸಿದರು.ರಾಜಾನುಕುಂಟೆ ಗ್ರಾಮಪಂಚಾಯಿತಿ ವ್ಯಾಪ್ತಿಯ ನಾಗರೀಕರು ಆಟೋ,ಬೈಕ್, ಮೂಲಕ ರ?ಯಾಲಿ ನಡೆಸಿ ಗೌರವ ಸೂಚಿಸಿದರು. ವಿವಿಧ ಸಾಂಸ್ಕೃತಿಕ ತಂಡಗಳಿಂದ ಕಲಾಪ್ರದರ್ಶನ ಮಾಡಲಾಯಿತು.
ಈ ವೇಳೆ ರಾಜಾನುಕುಂಟೆ ಮಾಜಿ ಉಪಾಧ್ಯಕ್ಷ ಎಸ್.ಜಿ.ನರಸಿಂಹಮೂರ್ತಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನದ ಮಹತ್ವ ಹಾಗೂ ಪ್ರತಿಯೊಬ್ಬರು ಅರಿತು ಇತರರಿಗೂ ತಿಳಿಸುವ ಮೂಲಕ ಪ್ರತಿಯೊಬ್ಬರ ಭಾರತೀಯ ಪ್ರಜೆಯಲ್ಲೂ ಸಂವಿಧಾನದ ಜಾಗೃತಿ ಮೂಡಿಸಬೇಕಿದೆ ಎಂದರು.ಕಾರ್ಯಕ್ರಮದಲ್ಲಿ ರಾಜಾನುಕುಂಟೆ ಗ್ರಾಮ ಪಂಚಾಯತಿ ಅಧ್ಯಕ್ಷೆ, ಅಂಬಿಕಾ ರಾಜೇಂದ್ರಕುಮಾರ್, ಉಪಾಧ್ಯಕ್ಷ ವೆಂಕಟೇಶ್,, ಸದಸ್ಯರಾದ ಮುತ್ತು.ಕೆವೇಣು, ಹೆ.ಚ್.ಆರ್.ಹನುಮೇಗೌಡ, ಮಮತಾ.ಬಿ.ಕೆ, ಆರ್.ಡಿ.ರಾಜಣ್ಣ, ಸುಜಾತಮ್ಮ,ಸೌಮ್ಯ, ಭವಾನಿ,ರಾಜು.ಕೆ, ಶಿವಕುಮಾರ್, ಭೈರಮ್ಮ, ಚಿಕ್ಕಣ್ಣ,ಚನ್ನಮ್ಮ,ರತ್ನಮ್ಮ, ಸಂತೋಷ್ ಕುಮಾರ್, ತಾ.ಪಂ.ಮಾಜಿ ಅಧ್ಯಕ್ಷ ಮುನಿದಾಸಪ್ಪ ಸೇರಿದಂತೆ ಇನ್ನಿತರರಿದ್ದರು.
