ಉದಯವಾಹಿನಿ, ಕಲಬುರ್ಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಾಲಕರ ಪ್ರೌಢಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ಜಯಶ್ರೀ ಹಿರೇಮಠ ಅವರಿಗೆ ತಾಲ್ಲೂಕಿನ ತಾಜ ಸುಲ್ತಾನಪುರ ಗ್ರಾಮದಲ್ಲಿ ಸನ್ಮಾನಿಸಲಾಯಿತು.
ಕಲ್ಪವೃಕ್ಷ ಎಜುಕೇಷನ್ ಸೊಸೈಟಿಯ ದಶಮಾನೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕಿ ಜಯಶ್ರೀ ಹಿರೇಮಠ ಅವರನ್ನು ಸಂಸ್ಥೆಯ ಮುಖ್ಯಸ್ಥರು ಸನ್ಮಾನಿಸಿ ಗೌರವಿಸಿದರು. ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಯ್ಯರವಾಡಿಯಲ್ಲಿರುವ ಬಾಲಕರ ಪ್ರೌಢ ಶಾಲೆಯಲ್ಲಿ ಇಂಗ್ಲೀಷ ಬೋಧಕಿಯಾಗಿ ಯಶಸ್ವಿ ಸೇವೆ ಸಲ್ಲಿಸಿರುವ ಶಿಕ್ಷಕಿ ಜಯಶ್ರಿ ಹಿರೇಮಠ ಸಾವಿರಾರು ವಿದ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
