ಉದಯವಾಹಿನಿ,ಆಳಂದ: ಶಿಕ್ಷಣ ಇಲಾಖೆಯ ಮೂಲಕ ನಡೆಸುವ ಪ್ರತಿಭಾ ಕಾರಂಜಿ ಕಾರ್ಯಕ್ರಮದಿಂದ ಮಕ್ಕಳ ಕಲಾ ಪ್ರತಿಭೆ ಅನಾವರಣಗೊಳ್ಳುತ್ತಿದೆ ಎಂದು ಮಾದನಹಿಪ್ಪರ್ಗಾ ಶ್ರೀ ಶಿವಲಿಂಗೇಶ್ವರ ವಿರಕ್ತಮಠದ ಅಭಿನವ ಶಿವಲಿಂಗ ಮಹಾಸ್ವಾಮೀಜಿ ಹೇಳಿದರು. ಪಟ್ಟಣದ ಜೂನಿಯರ ಕಾಲೇಜಿನಲ್ಲಿ ಜಿಪಂ ಮತ್ತು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 2022…23ನೇ ಸಾಲಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸಮಾರಂಭ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಚಿತ್ರಶೇಖರ ದೇಗುಲಮಡಿ ಅವರು ಮಾತನಾಡಿ ಮಕ್ಕಳಲ್ಲಿ ಸೂಕ್ತವಾಗಿರುವ ಕಲಾ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಲು ಕೆಲಸ ಈ ಕಾರ್ಯಕ್ರಮದ ಮೂಲಕ ನಡೆಯುತ್ತಿದೆ. ಈ ಕಾರ್ಯಕ್ರಮದಿಂದ ಸಂಸ್ಕೃತಿ ಪರಂಪರೆ ಕಲೆಯನ್ನು ಮರುಕಳಿಸಲು ಇದೊಂದು ಉತ್ತಮ ಅವಕಾಶವಿದೆ ಶಿಕ್ಷಕರ ಪಾಲಕರು ಇಂತಹ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು. ಪುರಸಭೆ ಅಧ್ಯಕ್ಷ ರಾಜಶ್ರೀ ಎಸ್ ಖಜೂರಿ ಕಾರ್ಯಕ್ರಮ ಉದ್ಘಾಟಿಸಿ ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಶುಭ ಕೋರಿದರು. ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರು ಶಿಕ್ಷಕರು ಮಕ್ಕಳು ಪಾಲಕರು ಇತರೆ ಇದ್ದರು.

Leave a Reply

Your email address will not be published. Required fields are marked *

error: Content is protected !!