ಉದಯವಾಹಿನಿ, ಕೆ.ಆರ್.ಪುರ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕೆ.ಆರ್.ಪುರದ ಬಿಬಿಎಂಪಿ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಸಂಭ್ರಮಾಚರಣೆ ವೇಳೆ ಮಾತನಾಡಿದ ಕೆಪಿಸಿಸಿ ಸದಸ್ಯ ಮಂಜುನಾಥ ಅವರು ಈ ಗೆಲುವು ಕಾಂಗ್ರೆಸ್ ಕಾರ್ಯಕರ್ತರ ಗೆಲುವಾಗಿದೆ ಎಂದು ನುಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಪರ ಕಾರ್ಯಗಳನ್ನು ಮಾಡುತ್ತಿದ್ದು,ಇದರ ಫಲವಾಗಿ ಗೆಲುವು ದೊರೆತಿದೆ ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆಯಲ್ಲೂ ಉತ್ತಮ ಫಲಿತಾಂಶ ಕಾಂಗ್ರೆಸ್ ಪಕ್ಷ ಪಡೆಯಲಿದೆ ಎಂದರು.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದ್ದು,ಕಾಂಗ್ರೆಸ್ ಅಭ್ಯರ್ಥಿ ಹೆಚ್ಚು ಮತಗಳಿಂದ ಜಯಭೇರಿ ಬಾರಿಸಲಿದ್ದಾರೆ ಎಂದು ಹೇಳಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರಳಪ್ಪ,ಸಿ.ವೆಂಕಟೇಶ್, ಕೊದಂಡರಾಮ,ಹಿರಿಯ ಮುಖಂಡರಾದ ಅಗರ
ಪ್ರಕಾಶ್,ಮನೋಜ್,ವಾರ್ಡನ ಅಧ್ಯಕ್ಷರಾದ ಪ್ರಸನ್ನ, ಬಾಸ್ಕೋ,ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಗೌಡ,ಮುಖಂಡರಾದ ರಾಮಾಂಜಿ,ಬಾಬು ಇದ್ದರು.

Leave a Reply

Your email address will not be published. Required fields are marked *

error: Content is protected !!