ಉದಯವಾಹಿನಿ, ಶಿಡ್ಲಘಟ್ಟ: ಭ್ರಷ್ಟಾಚಾರ, ಸ್ವಜನಪಕ್ಷಪಾತ, ದುರಾಡಳಿತದ ಮೂಲಕ ರಾಜ್ಯದ ಜನರಿಗೆ ನಿರಂತರವಾಗಿ ದ್ರೋಹ ಮಾಡುತ್ತಿರುವ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳನ್ನು ತಿರಸ್ಕರಿಸಿ ಮತ್ತು ರಾಜ್ಯದ ಏಕೈಕ ಪ್ರಾಮಾಣಿಕ ಮತ್ತು ಪ್ರಾದೇಶಿಕ ಪಕ್ಷವಾದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವನ್ನು ಬೆಂಬಲಿಸಿ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್. ಜೀವನ್ ಹೇಳಿದರು.
ಕರ್ನಾಟಕಕ್ಕಾಗಿ ನಾವು ಎನ್ನುವ ಹೆಸರಿನಲ್ಲಿ ರಾಜ್ಯವ್ಯಾಪಿ೧೩ ದಿನಗಳ ಕಾಲ ೩೦೦೦ ಕಿಲೋಮೀಟರ್ ಗಳ ಬೈಕ್ ಜಾಥಾ ಹೋರಟಿರುವ ಕಾರ್ಯಕರ್ತರು ಸೋಮವಾರ ದೇವನಹಳ್ಳಿಯಿಂದ ಪ್ರಾರಂಭವಾದ ಬೈಕ್ ಜಾಥಾ ಮೂಲಕ ಆಗಮಿಸಿ ತಾಲೂಕು ಕಚೇರಿ ಮುಂಭಾಗ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ಸ್ವಚ್ಚ, ಪ್ರಾಮಾಣಿಕ, ಜನಪರ, ಪ್ರಾದೇಶಿಕ ರಾಜಕಾರಣದ ಕುರಿತು ಜನಜಾಗೃತಿ ಮೂಡಿಸಲು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಕರ್ನಾಟಕಕ್ಕಾಗಿ ನಾವು ಎನ್ನುವ ಹೆಸರಿನಲ್ಲಿ ರಾಜ್ಯವ್ಯಾಪಿ ಬೈಕ್ ಜಾಥಾ ಹಮ್ಮಿಕೊಂಡಿದ್ದೇವೆ.
ಭ್ರಷ್ಟರನ್ನು, ಅಪ್ರಾಮಾಣಿಕರನ್ನು, ಸ್ವಜನಪಕ್ಷಪಾತಿಗಳನ್ನು, ಅನೈತಿಕ ನಡವಳಿಕೆ ಉಳ್ಳವರನ್ನು, ಸುಳ್ಳರನ್ನು, ಸಮಾಜಘಾತುಕ ಶಕ್ತಿಗಳನ್ನು, ಕುಟುಂಬ ರಾಜಕಾರಣದ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಮಣ್ಣುಪಾಲು ಮಾಡುತ್ತಿರುವ ಜೆ.ಸಿ.ಬಿ. ಪಕ್ಷಗಳ ಪರಮಸ್ವಾರ್ಥಿ ರಾಜಕಾರಣಿಗಳನ್ನು ತಮ್ಮ ಮತ್ತು ತಮ್ಮ ಮಕ್ಕಳ ರಾಜಕೀಯ ನಾಯಕರೆಂದು ಒಪ್ಪಿಕೊಳ್ಳದೆ ಜನಪರ ಕಾಳಜಿಯ, ಸ್ವಚ್ಚ ಮತ್ತು ಪ್ರಾಮಾಣಿಕ ರಾಜಕೀಯ ವ್ಯವಸ್ಥೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ನಾಡಪ್ರೇಮಿ ಸೈನಿಕ ಕೆ ಅರ್ ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿಯವರು ಮಾತನಾಡಿ ನಾಡಪ್ರೇಮಿಗಳೇ, ಏಳಿ, ಎದ್ದೇಳಿ! ಭ್ರಷ್ಟ ವ್ಯವಸ್ಥೆಯನ್ನು ತೊಲಗಿಸಿ, ಭವ್ಯ ಸಮಾಜವನ್ನು ನಿರ್ಮಿಸಿ. ಹೆಮ್ಮೆ ಮತ್ತು ಘನತೆಯಿಂದ ಜೀವಿಸಿ, ಸ್ವಾಭಿಮಾನದಿಂದ ಬದುಕಿ, ಬಾಳಿ” ಎಂದು ಕರೆ ನೀಡಿದರು.
ಬೈಕ್ ಜಾಥಾದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ. ಎನ್., ರಾಜ್ಯ ಉಪಾಧ್ಯಕ್ಷರಾದ ಲಿಂಗೇಗೌಡ ಎಸ್ ಎಚ್, ರಾಜ್ಯ ಕಾರ್ಯದರ್ಶಿ ರಘು ಜಾಣಗೆರೆ, ಮಲ್ಲಿಕಾರ್ಜುನ್ ಭಟ್ಟರಹಳ್ಳಿ, ನರಸಿಂಹಮೂರ್ತಿ, ಮಂಜುನಾಥ್ ಎಸ್,ರಾಜ್ಯ ಜಂಟಿ ಕಾರ್ಯದರ್ಶಿ ರಘುಪತಿ ಭಟ್, ರಾಜ್ಯ ಸಂಘಟನಾ ಕಾರ್ಯದರ್ಶಿ ನಂದಾರೆಡ್ಡಿ, ಆರೋಗ್ಯಸ್ವಾಮಿ, ಬಿ ಜಿ ಕುಂಬಾರ, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಇತರ ಪದಾಧಿಕಾರಿಗಳು ಈ ಬೈಕ್ ಜಾಥಾ ಉದ್ದಕ್ಕೂ ಭಾಗವಹಿಸಿದ್ದಾರೆ.
