ಉದಯವಾಹಿನಿ, ಬೆಂಗಳೂರು: ಬೀದಿಬದಿ ವ್ಯಾಪಾರಿಗಳು ಇಂದು ವಿಧಾನಸಭೆ ಕಾರ್ಯಕಲಾಪವನ್ನು ವೀಕ್ಷಿಸಿದರು. ಬೀದಿಬದಿ ವ್ಯಾಪಾರಿಗಳ ಒಕ್ಕೂಟದ ಪತ್ರಿನಿಧಿಗಳು ಇಂದು ಸದನದ ಕಾರ್ಯ ಕಲಾಪ ವೀಕ್ಷಿಸುತ್ತಿದ್ದು, ಅವರನ್ನು ಸ್ವಾಗತಿಸುವುದಾಗಿ ಸಭಾಧ್ಯಾಕ್ಷ ಯು.ಟಿ.ಖಾದರ್ ತಿಳಿಸಿದರು. ನಿನ್ನೆ ಅನಿವಾಸಿ ಭಾರತೀಯರು ಸದನದ ಕಾರ್ಯಕಲಾಪ ವೀಕ್ಷಿಸಿದ್ದರು. ಇಂದು ಬೀದಿಬದಿ ವ್ಯಾಪಾರಿಗಳು ಸದನದ ಗ್ಯಾಲರಿಗೆ ಆಗಮಿಸಿ ಕಾರ್ಯಕಲಾಪ ವೀಕ್ಷಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸಣ್ಣ-ಪುಟ್ಟ ವ್ಯಾಪಾರದ ಮೂಲಕ ಕುಟುಂಬ ನಿರ್ವಣೆ ಮಾಡುತ್ತಿದ್ದಾರೆ. ಅವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಅವರು ಹೇಳಿದರು.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಪಟ್ಟಣ ಪ್ರದೇಶಗಳಲ್ಲಿ ವಿಶೇಷವಾಗಿ ಮಹಾನಗರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬೀದಿಬದಿ ವ್ಯಾಪಾರಿಗಳಿದ್ದಾರೆ. ಅದರಲ್ಲೂ ಬೆಂಗಳೂರಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರಿಗೆ ಕಾನೂನು ರೀತಿ ರಕ್ಷಣೆ ಮಾನವೀಯತೆಯ ನೆರವು ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ನೆರವು ನೀಡುತ್ತಿವೆ ಎಂದರು.
ಶ್ರಮ ಜೀವಿಗಳಾಗಿದ್ದು, ಅವರಲ್ಲಿ ಆತ್ಮಸ್ಥೆ ೈರ್ಯ ತುಂಬುವ ನಿಟ್ಟಿನಲ್ಲಿ ತಾವು ಸದನ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟಿರುವುದು ಪ್ರಶಂಸನೀಯ ಎಂದರು ಹೇಳಿದರು. ಇದಕ್ಕೆ ದನಿಗೂಡಿಸಿದ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಅವರು ಅತ್ಯಂತ ದುರ್ಬಲ ವರ್ಗದವರಾದ ಬೀದಿ ಬದಿ ವ್ಯಾಪಾರಿಗಳಿಗೆ ಸದನ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟಿರುವುದು ನಿಜವಾದ ಪ್ರಜಾಪ್ರಭುತ್ವವನ್ನು ಎತ್ತಿ ತೋರಿಸುತ್ತಿದೆ.ಇದಕ್ಕಾಗಿ ಸಭಾಧ್ಯಕ್ಷರನ್ನು ಅಭಿನಂದಿಸುವುದಾಗಿ ತಿಳಿಸಿದರು. ಉತ್ತರ ಕರ್ನಾಟಕ ಸೇರಿದಂತೆ ಬೇರೆ ಬೇರೆ ಭಾಗಗಳಿಂದ ಬೆಂಗಳೂರಿಗೆ ಬಂದು ಬೀದಿ ಬದಿ ತಿಂಡಿ-ತಿನಿಸು ಮಾರಾಟ ಮಾಡುವ ಮೂಲಕ ಜೀವನ ಸಾಗಿಸುತ್ತಿದ್ದಾರೆ. ಅವರೊಂದು ರೀತಿ ಅನ್ನದಾತರು ಎಂದರು ಹೇಳಿದರು.
