ಉದಯವಾಹಿನಿ, ಬೆಂಗಳೂರು: ಲೋಕಸಭೆ ಹಾಗೂ ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಬಲಾಬಲ ಕ್ರೋಡೀಕರಣಕ್ಕಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಡರಾತ್ರಿ ಸದಾಶಿವನಗರದ ಮನೆಯಲ್ಲಿ ಸಂಪುಟದ ಸಚಿವರ ಜೊತೆ ಭೋಜನಕೂಟ ಏರ್ಪಡಿಸಿ ಚರ್ಚೆ ನಡೆಸಿದ್ದಾರೆ. 8 ಜನ ಸಚಿವರನ್ನುಹೊರತುಪಡಿಸಿದರೆ ಉಳಿದ ಎಲ್ಲರೂ ನಿನ್ನೆಯ ಭೋಜನಕೂಟದಲ್ಲಿ ಭಾಗವಹಿ ಸಿದ್ದರು. ಈ ವೇಳೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಮಹತ್ವದ ಚರ್ಚೆಯಾಗಿದೆ.
ಕೆಲವು ಕ್ಷೇತ್ರಗಳಲ್ಲಿ 2-3 ಕ್ಕಿಂತಲೂ ಹೆಚ್ಚಿನ ಅಭ್ಯರ್ಥಿಗಳಿದ್ದಾರೆ. ಹೀಗಾಗಿ ಅವರ ನಡುವೆ ಚರ್ಚೆ ನಡೆಸಿ ಯಾವುದೇ ಅಸಮಾಧಾನಕ್ಕೆ ಅವಕಾಶವಿಲ್ಲದಂತೆ ಸೌಹಾರ್ದಯುತವಾಗಿ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಪ್ರಮುಖ ವಿಚಾರವಾಗಿ ಚರ್ಚೆಯಾಗಿದೆ. ಜೊತೆಗೆ ಪಕ್ಷ ಸಂಘಟನೆಗೆ ಸಂಬಂಧಪಟ್ಟಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆಗಳಾಗಿವೆ.

ಜಿಲ್ಲಾ ಉಸ್ತುವಾರಿ ಸಚಿವರು ಚುನಾವಣಾ ಹೊಣೆಗಾರಿಕೆ ಒಪ್ಪಿಕೊಳ್ಳಬೇಕು. ರಾಜ್ಯಮಟ್ಟದಲ್ಲಿ ಅಷ್ಟೇ ಅಲ್ಲದೆ, ರಾಷ್ಟ್ರಮಟ್ಟದಲ್ಲೂ ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರಲು ಶ್ರಮಿಸಬೇಕಿದೆ. ಹೀಗಾಗಿ ಹೈಕಮಾಂಡ್‍ನ ಸಂದೇಶದನುಸಾರ ಎಲ್ಲರೂ ಬದ್ಧತೆಯಿಂದ ಕೆಲಸ ಮಾಡಬೇಕು. ಆಂತರಿಕವಾಗಿ ಸಣ್ಣಪುಟ್ಟ ಭಿನ್ನಮತಗಳಿದ್ದರೂ ಅದರ ಬಗ್ಗೆ ತಲೆಕೆಡಿಸಿಕೊಳ್ಳಬಾರದೆಂದು ಸಲಹೆ ನೀಡಲಾಗಿದೆ.

 

Leave a Reply

Your email address will not be published. Required fields are marked *

error: Content is protected !!