ಉದಯವಾಹಿನಿ, ಕಲಬುರಗಿ : ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕನಕಗಿರಿ ಉತ್ಸವದಲ್ಲಿ ಸಾಂಸ್ಕøತಿಕ ಕಾರ್ಯಕ್ರಮ ನೀಡಲು ಕಲ್ಯಾಣ ಕರ್ನಾಟಕದ ಕಲಬುರಗಿಯ ಖ್ಯಾತ ಆಕಾಶವಾಣಿ ಕಲಾವಿದರಾದ ಶಿವಕುಮಾರ ಜಾಲಹಳ್ಳಿ ಆಯ್ಕೆಯಾಗಿದ್ದಾರೆ.
ಶಿವಕುಮಾರ ಜಾಲಹಳ್ಳಿ ಅವರು ಮಾರ್ಚ್ 2 ರಂದು ಡಾ.ಪಂ.ಪುಟ್ಟರಾಜ ಗವಾಯಿಗಳ ವೇದಿಕೆಯಲ್ಲಿ ವಚನ ಗಾಯನ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆಂದು ಎಂದು ಕೊಪ್ಪಳ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
