ಉದಯವಾಹಿನಿ, ಕಲಬುರಗಿ: ಸರಸಂಬಾ ಗ್ರಾಮದ ಬಿಜೆಪಿ ಮುಖಂಡ ಮಹಾಂತಪ್ಪ ‌ಸಿದ್ದರಾಮಪ್ಪ ಆಲೂರೆ (45) ಅವರನ್ನು ಗುರುವಾರ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಆಳಂದ ತಾಲೂಕಿನ ಸರಸಂಬಾ ಗ್ರಾಮದಲ್ಲಿ ಧನಲಕ್ಷ್ಮಿ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದ ಮಹಾಂತಪ್ಪ, ಸತತ ಮೂರು ಬಾರಿ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದರು.
ಮಹಾಂತಪ್ಪ, ಬೆಳಿಗ್ಗೆ ಹೊಲದಲ್ಲಿ ಕಟ್ಟಿಹಾಕಿದ್ದ ಹಸುವಿನ ಹಾಲು ತೆಗೆದುಕೊಂಡು ಮನೆಯತ್ತ ಬರುತ್ತಿದ್ದರು. ಈ ವೇಳೆ ಗ್ರಾಮದ ಮುಖ್ಯರಸ್ತೆಯ ಜೆಸ್ಕಾಂ ಕಚೇರಿ ಸಮೀಪ ಕಾರಿನಲ್ಲಿ ಬಂದ ದುಷ್ಕರ್ಮಿಗಳು, ಮಹಾಂತಪ್ಪ ಅವರನ್ನು ಅಡ್ಡಗಟ್ಟಿದ್ದಾರೆ.
ನಂತರ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಗಂಭೀರವಾಗಿ ಗಾಯಗೊಳಿಸಿ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಾಂತಪ್ಪ ಅವರನ್ನು ಸೋಲಾಪುರ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಮಾದನ ಹಿಪ್ಪರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಉದಯವಾಹಿನಿ,

Leave a Reply

Your email address will not be published. Required fields are marked *

error: Content is protected !!