ಉದಯವಾಹಿನಿ, ಬೆಂಗಳೂರು: ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿಬಿಎಂಪಿ ಅಧಿಕಾರಿ ಮತ್ತು ನೌಕರರು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಅಮೃತ್‍ರಾಜ್ ನೇತೃತ್ವದಲ್ಲಿ ಮುಖಂಡರಾದ ಸಾಯಿಶಂಕರ್, ಬಾಬಣ್ಣ, ಡಾ.ಶೋಭಾ , ರಾಮಚಂದ್ರ, ಕೆ.ಜಿ.ರವಿ, ರುದ್ರೇಶ್ ಸಮ್ಮುಖದಲ್ಲಿ ನಗರದ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.
ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ನ್ಯಾಯಯುತ ಬೇಡಿಕೆಗಳ ಹೋರಾಟಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಸಚಿವಾಲಯ ನೌಕರರ ಸಂಘ, ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ ನೌಕರರ ಸಂಘ, ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ, ಮತ್ತು ಕರ್ನಾಟಕ ರಾಜ್ಯ ಮಹಾನಗರಪಾಲಿಕೆ ನೌಕರರ ಸಂಘ, ಮೈಸೂರು ಮಹಾನಗರ ಪಾಲಿಕೆ ನೌಕರರ ಸಂಘ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ನೌಕರರ ಸಂಘ, ಕಲಬುರಗಿ ಮಹಾನಗರ ಪಾಲಿಕೆ ಅಕಾರಿಗಳ ಹಾಗೂ ನೌಕರರ ಸಂಘ, ತುಮಕೂರು ಮಹಾನಗರ ಪಾಲಿಕೆ ಅಕಾರಿಗಳ ಮತ್ತು ನೌಕರರ ಸಂಘ, ಬೆಳಗಾವಿ ಮಹಾನಗರ ಪಾಲಿಕೆ ನೌಕರರ ಕ್ಷೇಮಾಭಿವೃದ್ದಿ ಸಂಘ, ದಾವಣಗೆರೆ ಮಹಾನಗರಪಾಲಿಕೆ ನೌಕರರ ಸಂಘ, ಮಂಗಳೂರಿನ ಎಸ್.ಕೆ.ಮುನಿಸಿಪಲ್ ಎಂಪ್ಲಾಯಿಸ್ ಯೂನಿಯನ್ ಬೆಂಬಲ ಘೋಷಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿವೆ.
