ಉದಯವಾಹಿನಿ, ಬೆಂಗಳೂರು: ನಗರದ ಪ್ರಖ್ಯಾತ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಪೋಟ ಸಂಭವಿಸಿ ಘಟನೆಯಲ್ಲಿ ಐದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಎಚ್‍ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಇಂದು ಮಧ್ಯಾಹ್ನ ಏಕಾಏಕಿ ಸ್ಪೋಟಗೊಂಡ ಪರಿಣಾಮ ಕೆಫೆಯಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿದ್ದು, ಗ್ರಾಹಕರು ಕೆಫೆಯಿಂದ ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.

ಘಟನೆಯಲ್ಲಿ ಐದು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಪೋಟಕ್ಕೆ ಕಾರಣವೇನೆಂಬುದು ನಿಗೂಢವಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರು, ಬಾಂಬ್ ನಿಷ್ಕ್ರಿಯ ದಳದವರು ಸ್ಥಳಕ್ಕೆ ದೌಡಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!