ಉದಯವಾಹಿನಿ, ಬೆಂಗಳೂರು: ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ದತೆ ನಡೆಸಿರುವಂತೆ ಖಾಸಗಿ ಸುದ್ದಿ ವಾಹಿನಿ ಯೊಂದು ನಡೆಸಿರುವ ಸಮೀಕ್ಷೆಯಲ್ಲಿ ಈ ಬಾರಿ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ನೇತೃತ್ವದ ಎನ್‍ಡಿಎ ಮೈತ್ರಿಕೂಟ 24ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ. ಇಂಡಿಯಾ ಟಿವಿ ಸಿಎನ್‍ಎಕ್ಸ್ ಸಹಭಾಗಿತ್ವದಲ್ಲಿ ನಡೆಸಿರುವ ದಕ್ಷಿಣ ಭಾರತ 130 ಲೋಕಸಭಾ ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ 60 ಸ್ಥಾನ ಹಾಗೂ ಎನ್‍ಡಿಎ ಮೈತ್ರಿಕೂಟ 38 ಹಾಗೂ 32 ಕ್ಷೇತ್ರಗಳು ವೈಎಸ್‍ಆರ್ ಕಾಂಗ್ರೆಸ್, ಟಿಡಿಪಿ, ಎಐಎಡಿಎಂಕೆ, ಬಿಆರ್‍ಎಸ್, ಎಐಎಂಐಎಂ ಪಕ್ಷಗಳ ಪಾಲಾಗಲಿವೆ ಎಂದು ಸಮೀಕ್ಷೆ ತಿಳಿಸಿದೆ.

ಉತ್ತರಭಾರತದಲ್ಲಿ ಬಿಜೆಪಿಗೆ ಭಾರೀ ಬಹುಮತ ಸಿಗುವ ಸಾಧ್ಯತೆ ಇದ್ದರೆ, ಇದಕ್ಕೆ ವ್ಯತಿರಿಕ್ತ ಎಂಬಂತೆ ದಕ್ಷಿಣ ಭಾರತದಲ್ಲಿ ಬಿಜೆಪಿ ಕರ್ನಾಟಕ, ತೆಲಂಗಾಣ, ಗೋವಾ ಮತ್ತು ತಮಿಳುನಾಡಿನಲ್ಲಿ ಖಾತೆ ತೆರೆಯುವ ಸಂಭವವಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ, ಜೆಡಿಎಸ್ ಎನ್‍ಡಿ ಮೈತ್ರಿಕೂಟ 24 ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡರೆ ಆಡಳಿತಾರೂಢ ಕಾಂಗ್ರೆಸ್ 4 ಸ್ಥಾನಗಳನ್ನು ಮಾತ್ರ ಗೆಲ್ಲಬಹುದೆಂದು ಚುನಾವಣಾಪೂರ್ವ ಸಮೀಕ್ಷೆ ಹೇಳಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಪ್ರಧಾನಿ ನರೇಂದ್ರಮೋದಿ ಅವರ ವರ್ಚಸ್ಸಿನ ಪರಿಣಾಮ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುವ ಲಕ್ಷಣಗಳಿದ್ದು, ಕಾಂಗ್ರೆಸ್‍ಗೆ ಆಂತರಿಕ ಸಮಸ್ಯೆಗಳೇ ಹಿನ್ನಡೆ ಕಾರಣ ಎಂದು ತಿಳಿಸಿದೆ. ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಇದ್ದರೆ ಉಳಿದ ಕಡೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಗೆಲುವಿನ ರಣಕೇಕೆ ಹಾಕಲಿದೆ.

 

Leave a Reply

Your email address will not be published. Required fields are marked *

error: Content is protected !!