ಉದಯವಾಹಿನಿ, ದಾವಣಗೆರೆ: ಧಾರ್ಮಿಕ ಕ್ಷೇತ್ರದಲ್ಲಿ ತನ್ನದೇ ಇತಿಹಾಸ ಹೊಂದಿರುವ ಹೆಬ್ಬಾಳು ಗ್ರಾಮದಲ್ಲಿ ಕನ್ನಡ ಸಾಹಿತ್ಯ, ಅಕ್ಷರದ ಜಾತ್ರೆ ಅದ್ಧೂರಿಯಾಗಿ ನೆರವೇರಿತು.ಇಡೀ ಗ್ರಾಮದಲ್ಲಿ ಕನ್ನಡದ ವಾತಾವರಣ ನಿರ್ಮಾಣವಾಗಿತ್ತು. ಚಿತ್ತಾಕರ್ಷಕ, ಬಣ್ಣ ಬಣ್ಣದ ರಂಗೋಲಿ, ತಳಿರು, ತೋರಣಗಳು ಕನ್ನಡದ ನುಡಿಜಾತ್ರೆಯ ಸೊಬಗು ಹೆಚ್ಚಿಸಿದವು.ತಮ್ಮೂರಲ್ಲಿ ತಾಲೂಕು ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದನ್ನ ಕಣ್ತುಂಬಿಕೊಳ್ಳುವ ಜೊತೆಗೆ ಕನ್ನಡದ ಸೇವೆ ಸಲ್ಲಿಸಲು ದೊರೆತ ಕ್ಷಣವನ್ನು ಅವಿಸ್ಮರಣೀಯವಾಗಿಸಿದರು. ಸದಾ ಸ್ಮೃತಿಯಲ್ಲಿ ಕಾಪಿಟ್ಟುಕೊಂಡರು.ಸಮ್ಮೇಳನದ ಸರ್ವಾಧ್ಯಕ್ಷೆ, ಖ್ಯಾತ ಲೇಖಕಿ ಬಿ.ಟಿ.ಜಾಹ್ನವಿಯವರ ಮೆರವಣಿಗೆಗೆ ತಹಶೀಲ್ದಾರ್ ಡಾ.ಎಂ.ಬಿ ಅಶ್ವಥ್ ಚಾಲನೆ ನೀಡಿದರು. ಗ್ರಾಮದ ಪ್ರಮುಖ ರಸ್ತೆ ಗಳಲ್ಲಿ ಮೆರವಣಿಗೆ ಸಾಗಿ ಬಂದಿತು. ಮೆರವಣಿಗೆಗೂ ಮುನ್ನ ಧ್ವಜಾರೋಹಣ ನೆರವೇರಿತು.ಶ್ರೀ ರುದ್ರೇಶ್ವರ ಸಮುದಾಯ ಭವನದಲ್ಲಿ ಹೆಬ್ಬಾಳು ವಿರಕ್ತಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿಯವರ ಸಾನಿಧ್ಯ, ಶಾಸಕ ಕೆ.ಎಸ್ ಬಸವಂತಪ್ಪ ಅಧ್ಯಕ್ಷತೆಯಲ್ಲಿ ವಹಿಸಿಕೊಳ್ಳಲಿ ಶಾಸಕ ಶಾಮನೂರು ಶಿವಶಂಕರಪ್ಪ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಮಹಾದ್ವಾರ, ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಬಳ್ಳಾರಿ ಸಿದ್ದಮ್ಮ ಮಹಾಮಂಟಪ ಉದ್ಘಾಟಿಸಿದರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವ ಡಾ.ಬಿ.ಇ ರಂಗಸ್ವಾಮಿ ಸಮ್ಮೇಳನ ಉದ್ಘಾಟನೆ ಮಾಡಲಿದ್ದಾರು. ಕಸಾಪ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಆಶಯ ನುಡಿಗಳನ್ನಾಡಿದರು. ತಾಲ್ಲೂಕು ಕಸಾಪ ಅಧ್ಯಕ್ಷೆ ಸುಮತಿಜಯಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು.ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಬಿ.ಎನ್ ಮಲ್ಲೇಶ್ ಕನ್ನಡಧ್ವಜ ಹಸ್ತಾಂತರ ಮಾಡಿದರು.ತಾಲೂಕು ಕಸಾಪ ಗೌರವಾಧ್ಯಕ್ಷ ದಾಗಿನಕಟ್ಟೆ ಪರಮೇಶ್ವರಪ್ಪ ಸಮ್ಮೇಳನಾಧ್ಯಕ್ಷರ ಪರಿಚಯ ಮಾಡಿ ಕೊಟ್ಟರು. ಸಮ್ಮೇಳನಾಧ್ಯಕ್ಷರಾದ ಸಾಹಿತಿ ಬಿ.ಟಿ ಜಾಹ್ನವಿ ಸಮ್ಮೇಳನಾಧ್ಯಕ್ಷರ ನುಡಿಗಳನ್ನಾಡಿದರು.ಸಿಇಓ ಸುರೇಶ್ ಬಿ ಹಿಟ್ನಾಳ್,ಅಣಬೇರು ರಾಜಣ್ಣ,ಪ್ರಭಾ ಮಲ್ಲಿಕಾರ್ಜುನ್, ಗ್ರಾಮದ ಮುಖಂಡರು, ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಇತರರು ಇದ್ದರು.
