ಉದಯವಾಹಿನಿ, ಗದಗ : ಪೊಲಿಯೋ ಮುಕ್ತ ಜಿಲ್ಲೆಯಾಗಿಸಲು ಸಾರ್ವಜನಿಕರು ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.
ನಗರದ ಹೊಸ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ ವಸ್ತು ಪ್ರದರ್ಶನದ ಉದ್ಘಾಟಸಿ ನಂತರ ಮಗುವಿಗೆ ಪೊಲಿಯೋ ಲಸಿಕೆ ನೀಡಿ ಅವರು ಮಾತನಾಡಿದರು.
ರಾಷ್ಟ್ರೀಯ ಪಲ್ಸ್ ಪೊಲಿಯೋ ಅಭಿಯಾನದಲ್ಲಿ ಗದಗ ಜಿಲ್ಲೆಯ 0-5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ತಪ್ಪದೇ ತಮ್ಮ ಸಮೀಪದ ಲಸಿಕಾ ಕೇಂದ್ರದಲ್ಲಿ ಪೊಲಿಯೋ ಹನಿ ಹಾಕಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಮೀನಾಕ್ಷಿ ಕೆ.ಎಸ್ ಅವರು ಮಾತನಾಡಿ ಜಿಲ್ಲೆಯಲ್ಲಿ ಒಟ್ಟು 129327 ಮಕ್ಕಳಿಗೆ ಪೆÇಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು ಆ ಪೈಕಿ ಮಾರ್ಚ 3 ರವರೆಗೆ 1,20,185 ಮಕ್ಕಳಿಗೆ ಪೆÇಲಿಯೋ ಲಸಿಕೆ ಹಾಕಲಾಗಿದೆ. ತಾಲೂಕಾವಾರು ಲಸಿಕೆ ಹಾಕಿದ ವಿವರ ಇಂತಿದೆ: ಗದಗ- 43,059, ಮುಂಡರಗಿ- 13,582, ನರಗುಂದ- 10,124, ರೋಣ- 31,264, ಶಿರಹಟ್ಟಿ- 22,156 ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಜಿಲ್ಲಾ ಅಧ್ಯಕ್ಷರಾದ ರಾಜು ಹೆಬ್ಬಳ್ಳಿ, ವಾರ್ತಾದಿಕಾರಿ ವಸಂತ ಮಡ್ಲೂರ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಮೀನಾಕ್ಷಿ , ಗಣ್ಯರಾದ ಅಶೋಕ ಮಂದಾಲಿ, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು.
