
ಉದಯವಾಹಿನಿ,ರಾಮನಗರ, ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿಗಳ ಕಡೆಗೆ ಕಾರ್ಯಕ್ರಮವನ್ನು ಬಿಡದಿ ಹೋಬಳಿ ಬನ್ನಿಕುಪ್ಪೆ (ಬಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತರಾಯನಗುಡಿಪಾಳ್ಯ ಗ್ರಾಮದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಶಾಸಕ ಎ.ಮಂಜುನಾಥ್ ರವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು,ಸದಸ್ಯರುಗಳು, ಮತ್ತು ಮುಖಂಡರುಗಳು ಹಾಜರಿದ್ದರು ಸ್ಥಳೀಯ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಲು ಗ್ರಾಮಸ್ಥರಿಗೆ ಸೂಚಿಸಿದರು.ಪ್ರಮುಖವಾಗಿ ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡಿರುವ 103 ಮಂದಿ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರಗಳನ್ನು ಹಾಗೂ ಇ-ಖಾತೆಗಳನ್ನು ವಿತರಿಸಿದರು ಹಾಗೂ ಮಳೆಯಿಂದ ಹಾನಿಯಾಗಿದ್ದ ಕುಟುಂಬದವರಿಗೆ ಚೆಕ್ ವಿತರಿಸಿದರು ಮತ್ತು ಕಾರ್ಮಿಕ ಇಲಾಖೆಯಿಂದ ಅರ್ಹ ಫಲಾನುಭವಿಗಳಿಗೆ ಸಲಕರಣೆಗಳು ಹಾಗೂ ಹೊಲಿಗೆಯಂತ್ರವನ್ನು ಶಾಸಕ ಎ.ಮಂಜುನಾಥ್ ವಿತರಿಸಿದರು.