ಉದಯವಾಹಿನಿ, ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರ ಅತಿಯಾದ ತುಷ್ಟೀಕರಣ ನಡೆಯುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪುಷ್ಟಿ ನೀಡುವಂತಹ ಸರ್ಕಾರಿ ಆದೇಶವೊಂದು ಹೊರಬಿದ್ದಿದೆ. ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಉದ್ಯಮಶೀಲರು ಸ್ಥಾಪಿಸುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳಿಗೆ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ(ಕೆಎಸ್‍ಎಫ್‍ಸಿ)ಮೂಲಕ ಶೇ.6ರ ಬಡ್ಡಿ ದರದಲ್ಲಿ 10 ಕೋಟಿ ರೂ. ಸಾಲ ಪಡೆಯುವ ಆದೇಶವನ್ನು ಹೊರಡಿಸಿದೆ.
ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ನೀಡುವ ಬಡ್ಡಿ ಸಹಾಯಧನ ಯೋಜನೆಯಡಿ ಸಾಲ ಪಡೆಯುವ ಉದ್ಯಮಿಗಳು ರಾಜ್ಯ ಹಣಕಾಸು ನಿಗಮದ ಆಯಾ ಜಿಲ್ಲಾ ಮಟ್ಟದ ಕಚೇರಿಗಳಿಗೆ ನೇರವಾಗಿ ಅರ್ಜಿಗಳನ್ನು ಸಲ್ಲಿಸಬೇಕು. ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಲು ಯಾವುದೇ ಮಂಜೂರಾತಿ ಸಮಿತಿ ಇರುವುದಿಲ್ಲ. ಕರ್ನಾಟಕ ರಾಜ್ಯ ಹಣಕಾಸು ನಿಗಮದ ಸಾಲ ಮಂಜೂರಾತಿ ನಿಯಮಗಳನ್ವಯ ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಸಾಲ ಮಂಜೂರಾತಿ ಮಾಡತಕ್ಕದ್ದು ಎಂದು ಅಲ್ಪಸಂಖ್ಯಾತ ಕಲ್ಯಾಣ, ಹಜ್ ಮತ್ತು ವಕ್ ಇಲಾಖೆ ಅೀನ ಕಾರ್ಯದರ್ಶಿ ನಾಗರಾಜ್ ಅವರು ಸುತ್ತೋಲೆ ಹೊರಡಿಸಿದ್ದಾರೆ.
