ಉದಯವಾಹಿನಿ, ಅಫಜಲಪುರ: ಬತ್ತಿದ ಭೀಮಾ ನದಿಗೆ ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಅಥವಾ ತಾತ್ಕಾಲಿಕವಾಗಿ ಬಸವಸಾಗರ ಜಲಾಶಯದಿಂದ ಕಾಲುವೆ ಮುಖಾಂತರ ನೀರು ಹರಿಸುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ರಮೇಶ ಹೂಗಾರ ಅವರು ಕಲಬುರಗಿ ನಗರಕ್ಕೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು. ಈ ಬಾರಿ ಬರಗಾಲದ ಅಭಾವದಿಂದಾಗಿ ರೈತರ ಬೆಳೆಗಳು ಹಾಳಾಗಿ ಹೋಗಿವೆ. ಜನ ಜಾನುವಾರುಗಳು ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ. ಹೀಗಾಗಿ ಕೂಡಲೇ ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಿ ಎಕರೆಗೆ 25 ಸಾವಿರ ಪರಿಹಾರ ನೀಡಬೇಕು ಎಂದು ಮುಂತಾದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಧರ್ಮರಾಜ್ ಸಾವು, ಭಾಗಣ್ಣ ಕುಂಬಾರ, ರೇವಣಸಿದ್ದಯ್ಯ, ಮಲ್ಲು ಸೋಲಾಪುರ್, ಕಂಟೆಪ್ಪ ಹನೂರು ಅನೇಕರಿದ್ದರು.
