ಉದಯವಾಹಿನಿ, ಚಿಕ್ಕಬಳ್ಳಾಪುರ:  ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳೂ ಸೇರಿದಂತೆ ವಿವಿಧ ಯೋಜನೆಗಳು, ಕಾರ್ಯಕ್ರಮಗಳನ್ನು ಬಿಂಬಿಸುವ ಸಂಬಂಧ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕೆ.ಎಸ್.ಆರ್.ಟಿ.ಸಿ ವಿಭಾಗ, ಚಿಕ್ಕಬಳ್ಳಾಪುರ ಮತ್ತು ಜಿಲ್ಲಾಡಳಿತದ ಸಹಯೋಗದಲ್ಲಿ ಏರ್ಪಡಿಸಿರುವ ವಸ್ತುಪ್ರದರ್ಶನ ಮಳಿಗೆಯನ್ನು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಇ. ಪ್ರದೀಪ್ ಈಶ್ವರ್ ರವರು ಮಂಗಳವಾರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು ಪಂಚ ಗ್ಯಾರಂಟಿ ಯೋಜನೆಗಳ ಈ ವಸ್ತುಪ್ರದರ್ಶನ ಮಳಿಗೆಯು ಇಂದಿನಿಂದ ಮಾರ್ಚ್ ೧೪ ರವರೆಗೆ ಮೂರು ದಿನಗಳ ಕಾಲ ಪ್ರದರ್ಶನ ಗೊಳ್ಳಲಿದ್ದು, ಸಾರ್ವಜನಿಕರು ಪ್ರಯಾಣಿಕರು ಹೆಚ್ಚಿನ ಮಟ್ಟದಲ್ಲಿ ಈ ಕೇಂದ್ರಕ್ಕೆ ಭೇಟಿ ನೀಡಿ ಸರ್ಕಾರದ ಎಲ್ಲಾ ಯೋಜನೆಗಳ ಬಗ್ಗೆ ತಿಳಿದುಕೊಂಡು ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಒಂದೊತ್ತಿನ ಊಟಕ್ಕೂ ಪ್ರತಿದಿನ ಹೋರಾಟ ಮಾಡುವ ಕಡು ಬಡವರಿಗೆ ಪಂಚ ಗ್ಯಾರಂಟಿ ಯೋಜನೆಗಳು ವರದಾನವಾಗಿವೆ. ಜೊತೆಗೆ ಮಧ್ಯಮ ವರ್ಗದ ಜನರಿಗೂ ಸಹ ಉಪಯೋಗಕಾರಿಯಾಗಿವೆ ಎಂದರು.
ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣ ಅಧಿಕಾರಿ ಪ್ರಕಾಶ್ ಜಿ.ಟಿ.ನಿಟ್ಟಾಲಿ, ಕೆ.ಎಸ್.ಆರ್.ಟಿ.ಸಿ. ಉಪವಿಭಾಗ ನಿಯಂತ್ರಣಾಧಿಕಾರಿ ಅಲ್ಲೂರಿ ಹಿಮವರ್ದನ್ ನಾಯ್ಡು ಹಾಗೂ ಇತರೆ ಗಣ್ಯರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

error: Content is protected !!