ಉದಯವಾಹಿನಿ,ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಮತ್ತೊಮ್ಮೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಮಾ.21 ರಂದು ಕುಮಾರಸ್ವಾಮಿಯವರಿಗೆ ಪರಿಣಿತ ತಜ್ಞ ವೈದ್ಯರಿಂದ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ದೆಹಲಿ ಪ್ರವಾಸದಿಂದ ಮರಳಿದ ನಂತರ ಚಿಕಿತ್ಸೆಗಾಗಿ ಕುಮಾರಸ್ವಾಮಿಯವರು ಚೆನ್ನೈಗೆ ತೆರಳಲಿದ್ದಾರೆ. ಮಾ.19 ರಂದು ಚೆನ್ನೈನ ಖಾಸಗಿ ಆಸ್ಪತ್ರೆಗೆ ಕುಮಾರಸ್ವಾಮಿ ದಾಖಲಾಗಲಿದ್ದಾರೆ. ಮಾ.21 ರಂದು ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ. ಮಾ.25 ರ ನಂತರ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮರಳುವ ಸಾಧ್ಯತೆಯಿದೆ.
ಹೀಗಾಗಿ ಒಂದು ವಾರ ಕಾಲ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ಇತ್ತೀಚೆಗೆ ಅವರು ಲಘು ಪಾಶ್ರ್ವವಾಯು ಸಮಸ್ಯೆಗೆ ಒಳಗಾಗಿ ಚಿಕಿತ್ಸೆ ಪಡೆದಿದ್ದರು. ಈಗಾಗಲೇ ಅವರು ಎರಡು ಬಾರಿ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ.ಈ ಸಂಬಂಧ ಹಾಸನದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿರುವ ಕುಮಾರಸ್ವಾಮಿಯವರು, ಜನರ ಕೆಲಸದ ವಿಚಾರದಲ್ಲಿ ನಾನು ನನ್ನ ಆರೋಗ್ಯವನ್ನೂ ಲೆಕ್ಕಿಸುತ್ತಿಲ್ಲ. ಎಷ್ಟೇ ಆರೋಗ್ಯ ಸಮಸ್ಯೆ ಇದ್ದರೂ ನಾನು ರಾಜ್ಯಕ್ಕಾಗಿ ದುಡಿಯುತ್ತಿದ್ದೇನೆ.

ಚಿಕ್ಕ ವಯಸ್ಸಿನಿಂದಲೇ ನನಗೆ ಅರೋಗ್ಯ ಸಮಸ್ಯೆ ಇದೆ ಎಂದು ಹೇಳಿದ್ದರು. ಈಗಾಗಲೇ ಎರಡು ಬಾರಿ ಹೃದಯ ಚಿಕಿತ್ಸೆ ಆಗಿದೆ. ಈಗ ಮತ್ತೆ ಆಪರೇಷನ್‍ಗೆ ಹೋಗಬೇಕಾದ ಪರಿಸ್ಥಿತಿಗೆ ಬಂದಿದ್ದೇನೆ. ನನಗೆ ನನ್ನ ಆರೋಗ್ಯಕ್ಕಿಂತ ಜನರ ಹಿತ ಮುಖ್ಯ. ಇನ್ನೊಂದು ವಾರದಲ್ಲಿ ನಾನು ಮತ್ತೆ ಅಸ್ಪತ್ರೆಗೆ ಸೇರಬೇಕು. ಮಾ. 21ಕ್ಕೆ ಆಪರೇಷನ್ ಆಗುತ್ತದೆ. ಆಪರೇಷನ್ ಆದ ಬಳಿಕ ನಾನು ಮೂರು ದಿನ ವಿಶ್ರಾಂತಿ ಪಡೆದು ನಂತರ ನಮ್ಮ ಹಾಗು ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದರು.

Leave a Reply

Your email address will not be published. Required fields are marked *

error: Content is protected !!