ಉದಯವಾಹಿನಿ, ಚಿಟಗುಪ್ಪ: ಪಟ್ಟಣದ ಹೃದಯ ಭಾಗದಲ್ಲಿರುವ ಸುಭಾಷ್ ಚೌಕ್ ಬಳಿಯ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಮೇಲ್ಛಾವಣಿಯ ತಗಡು ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳಿಗೆ ಹಾನಿಯಾಗಿವೆ.
ಚಂದ್ರಯ್ಯ ಬಡಗು ಎನ್ನುವವರ ಮನೆಯಲ್ಲಿನ ಸಿಲೆಂಡರ್ ಸ್ಫೋಟಗೊಂಡಿದ್ದು, ಮನೆಯಲ್ಲಿ ಯಾರೂ ಇರದ ಕಾರಣ ಯಾವುದೇ ಜೀವ ಹಾನಿಯಾಗಿಲ್ಲ.
ಸಿಲಿಂಡರ್ ಸ್ಫೋಟಕ್ಕೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಚಿಟಗುಪ್ಪ ಠಾಣೆ ಪೆÇಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
