ಉದಯವಾಹಿನಿ, ಆನೇಕಲ್: ಬೊಮ್ಮಸಂದ್ರ ಪುರಸಭೆ ವ್ಯಾಪ್ತಿಯ ಕಿತ್ತಗಾನಹಳ್ಳಿ ಗ್ರಾಮದಲ್ಲಿ ಪುರಾತನ ಕಾಲದಿಂದ ನೆಲೆಸಿರುವ ಶ್ರೀನಿವಾಸ ಸ್ವಾಮಿಯ ಬ್ರಹ್ಮರಥೋತ್ಸವ ಅಪಾರ ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ನೆರವೇರಿತು. ಇನ್ನು ಶ್ರೀನಿವಾಸ ಸ್ವಾಮಿಯ ಬ್ರಹ್ಮರಥೋತ್ಸವ ಅಂಗವಾಗಿ ಭಕ್ತರು ಉರುಳು ಸೇವೆ ನಡೆಸಿದರು ಜೊತೆಗೆ ಎತ್ತುಗಳ ಮೆರವಣಿಗೆ ನಡೆಸಲಾಯಿತು. ಹಾಗೆಯೇ ಬಹುಮಾನವನ್ನು ವಿತರಣೆ ಮಾಡಲಾಯಿತು.
ಬ್ರಹ್ಮ ರಥೋತ್ಸವ ಅಂಗವಾಗಿ ಕಿತ್ತಗಾನಹಳ್ಳಿ ಗ್ರಾಮದ ಕುಲದೇವತೆಯಾದ ಶ್ರೀನಿವಾಸ ಸ್ವಾಮಿಯ ದೇವಾಲಯದಲ್ಲಿ ಬೆಳಿಗ್ಗೆ ಯಿಂದ ಪೂಜಾ ಕಾರ್ಯಕ್ರಮಗಳು ವಿದಿ ವಿಧಾನಗಳಿಂದ ಜರುಗಿತು ಜೊತೆಗೆ ಸ್ವಾಮಿಗೆ ಅಭಿಷೇಕ, ಹೂವಿನ ಅಲಂಕಾರ ಮಾಡಲಾಗಿತ್ತು,
ಇನ್ನು ಶ್ರೀನಿವಾಸ ಸ್ವಾಮಿಯ ಬ್ರಹ್ಮರಥೋತ್ಸವ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮಂಗಳ ವಾಧ್ಯಗಳೊಂದಿಗೆ ಸಾಗುತ್ತಿದ್ದಂತೆ ಭಕ್ತರು ಬಾಳೆಹಣ್ಣು, ಧವನವನ್ನು ರಥದ ಮೇಲೆ ಎಸೆದು ಭಕ್ತಿ ಪರಕಾಷ್ಠೆಯನ್ನು ಸ್ಮರಿಸಿದರು. ಇನ್ನು ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಭಕ್ತರಿಗೆ ಅರವಂಟಿಕೆ ಮತ್ತು ಅನ್ನದಾಸೋಹ ಏರ್ಪಡಿಸಲಾಯಿತು. ಹಾಗೆಯೇ ವಿವಿಧ ದೇವರುಗಳ ಪಲ್ಲಕ್ಕಿ ಉತ್ಸವ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಗಣ್ಯರು ಹಾಗೂ ದೇವಾಲಯದ ಆಡಳಿತ ಮಂಡಳಿಯವರು ಮತ್ತು ಗ್ರಾಮಸ್ಥರು ಬಾಗವಹಿಸಿದ್ದರು.
